ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಯಾತ್ರೆಯಿಂದ ಮೇಕೆದಾಟು ಇನ್ನಷ್ಟು ಕ್ಲಿಷ್ಟ: ಶಾಸಕ ಜಗದೀಶ ಶೆಟ್ಟರ್

Last Updated 9 ಜನವರಿ 2022, 9:10 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನದಿ ವಿವಾದವನ್ನು ಸೂಕ್ಷ್ಮವಾಗಿ ಬಗೆಹರಿಸಬೇಕೇ ಹೊರತು, ಪಾದಯಾತ್ರೆ ಮಾಡಿ ಬೀದಿಗಿಳಿದು ಅದನ್ನು ಇನ್ನಷ್ಟು‌ ಕ್ಲಿಷ್ಟಮಾಡುವುದು ಸರಿಯಲ್ಲ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ ಯಾಕೆ ಮೇಕೆದಾಟು ಯೋಜನೆಗೆ ತಾರ್ಕಿಕ ಅಂತ್ಯ ನೀಡಿಲ್ಲ. ಚುನಾವಣೆ ವೋಟ್ ಬ್ಯಾಂಕ್‌ಗಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬೆಂಗಳೂರು ಮತ್ತು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಮೇಕೆದಾಟು ವಿಷಯದ ಬಗ್ಗೆ ಗಂಭೀರ ಚರ್ಚೆಯನ್ನೇ ಮಾಡಿಲ್ಲ. ಚರ್ಚೆ ಮಾಡಿದರೆ ಸರ್ಕಾರ ಸೂಕ್ತ ಉತ್ತರ ನೀಡುತ್ತದೆ ಎಂದು ಹಿಂಜರಿದರು. ಬೀದಿಗಿಳಿದು ಹೋರಾಟ ಮಾಡುತ್ತಿರುವ ಅವರ ನಡೆ ಸಂಪೂರ್ಣ ರಾಜಕೀಯವಾಗಿದೆ. ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲೂ, ವಾರಾಂತ್ಯ ಕರ್ಫ್ಯೂ ಅವಧಿಯಲ್ಲೂ ಅವರು ನಿಯಮಾವಳಿ ಉಲ್ಲಂಘಿಸಿ ಭಂಡತನ ಪ್ರದರ್ಶಿಸುತ್ತಾರೆ. ಜನಸಾಮಾನ್ಯರ ಆರೋಗ್ಯಕ್ಕಿಂತ ರಾಜಕಾರಣವೇ ಅವರಿಗೆ ಮುಖ್ಯವಾಗಿದೆ. ಎಪ್ಪತ್ತು ವರ್ಷ ದೇಶ ಲೂಟಿ ಮಾಡಿ, ಈಗ ರಾಜಕೀಯ ಮಾಡುತ್ತಿದ್ದಾರೆ. ಇದೊಂದು ರಾಜಕೀಯ‌ ಪ್ರಹಸನವಾಗಿದ್ದು, ಜನರೇ ಅವರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮೇಕೆದಾಟು ವಿಷಯದಲ್ಲಿ ತಮಿಳುನಾಡು ಕಾಂಗ್ರೆಸ್ ತನ್ನ ನಡೆ ಏನೆಂಬುದನ್ನು ಸ್ಪಷ್ಟಪಡಿಸಲಿ. ಅಲ್ಲಿ ಯೋಜನೆ ವಿರೋಧಿಸುವ ಕಾಂಗ್ರೆಸ್, ಇಲ್ಲಿ ಅನುಷ್ಠಾನಕ್ಕೆ ಒತ್ತಾಯಿಸುತ್ತದೆ. ಮಹಾದಾಯಿ ವಿಚಾರದಲ್ಲೂ ಗೋವಾ ಕಾಂಗ್ರೆಸ್ ಇದೇ ರೀತಿ ವರ್ತಿಸುತ್ತಿದೆ. ಅವರು ಯಾವಾಗಲೂ ದ್ವಂದ್ವ ನಿಲುವು ತಾಳುತ್ತಲೇ ರಾಜಕೀಯ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹದಾಯಿ ವಿಚಾರದ ಕುರಿತು ಕಾಂಗ್ರೆಸ್ ಪಾದಯಾತ್ರೆ ನಡೆಸಿದರೆ, ಯೋಜನೆ ಕುರಿತು ಅವರು ಮಾಡಿರುವ ರಾಜಕಾರಣ ಬಹಿರಂಗ ಪಡಿಸುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT