ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾದಯಾತ್ರೆ ಕೈ ಬಿಟ್ಟು ಚರ್ಚೆಗೆ ಬನ್ನಿ: ಜಗದೀಶ ಶೆಟ್ಟರ್

Last Updated 10 ಜನವರಿ 2022, 7:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಬಿಟ್ಟು, ಸರ್ಕಾರದ ಜೊತೆ ಚರ್ಚೆಗೆ ಬರಲಿ ಎಂದು ಶಾಸಕ ಜಗದೀಶ ಶೆಟ್ಟರ್ ಆಗ್ರಹಿಸಿದರು.

ಸೋಮವಾರ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಇದರಿಂದ ಜನಸಾಮಾನ್ಯರಿಗೆ ಒಂದು ಕಾನೂನು, ರಾಜಕೀಯ ಮುಖಂಡರಿಗೆ ಒಂದು ಕಾನೂನು ಎನ್ನುವ ತಪ್ಪು ಸಂದೇಶ ರವಾನೆಯಾಗುತ್ತಿದೆ. ಇದನ್ನು ತಡೆಯಲು ಸರ್ಕಾರವೇನೂ ಅಸಮರ್ಥವಾಗಿಲ್ಲ. ಕಾನೂನಿನ ಪ್ರಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅವನ್ನು ಗೃಹ ಸಚಿವರು ತೆಗೆದುಕೊಳ್ಳುತ್ತಾರೆ ಎಂದರು.

ಕಾಂಗ್ರೆಸ್ ಮುಖಂಡರಿಗೆ ಸಮಾಜ ಹಾಗೂ ಜನಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಪಾದಯಾತ್ರೆ ಮಾಡುತ್ತಿರಲಿಲ್ಲ. ಪ್ರತಿಷ್ಠೆಯ ಪ್ರಶ್ನೆ ಎನ್ನುತ್ತ ಹಠಮಾರಿ ಧೋರಣೆಯಿಂದ ಈ ರೀತಿ ವರ್ತಿಸುತ್ತಿದ್ದಾರೆ. ಅವರ ಪಾದಯಾತ್ರೆಯಿಂದ ಸೋಂಕು ಹೆಚ್ಚಳವಾಗಲಿದೆ. ಇದೆಲ್ಲ ಅವರಿಗೆ ಯಾಕೆ ಅರ್ಥವಾಗುತ್ತಿಲ್ಲ ಎಂದು ಶೆಟ್ಟರ್ ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT