ಭಾನುವಾರ, ಸೆಪ್ಟೆಂಬರ್ 26, 2021
28 °C

ಬಿಎಸ್‌ವೈ ಕೆಲಸ ಬೊಮ್ಮಾಯಿ ಮುಂದುವರಿಸಲಿ: ಜಗದೀಶ್‌ ಶೆಟ್ಟರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಕೆಲಸಗಳನ್ನು ಮುಂದುವರಿಸಬೇಕು ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು.

ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಕೈಗಾರಿಕಾ ಸಚಿವನಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದೆ. ರಾಜ್ಯಕ್ಕೆ ಉದ್ಯಮಿಗಳನ್ನು ಸೆಳೆಯಲು ಸಫಲನಾಗಿದ್ದೆ. ಈಗಿನ ಕೈಗಾರಿಕಾ ಸಚಿವರಿಗೆ ನಿರಂತರ ಮಾರ್ಗದರ್ಶನ ಮಾಡುವೆ‌. ರಾಜ್ಯದಲ್ಲಿ ಏನೇ ಕೆಲಸ ಬೇಕಾದರೂ ಮಾಡಿಸಿಕೊಳ್ಳುವ ಸಾಮರ್ಥ್ಯವಿದೆ’ ಎಂದರು.

ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆಯೇ ಎನ್ನುವ ಪ್ರಶ್ನೆಗೆ ‘ಈಶ್ವರಪ್ಪ, ಗೋವಿಂದ ಕಾರಜೋಳ, ಆರ್‌. ಅಶೋಕ್ ಸೇರಿದಂತೆ ಅನೇಕ ಹಿರಿಯರು ಸಚಿವರಾಗಿದ್ದಾರೆ. ಬೇರೆ ಪಕ್ಷದಿಂದ ಬಂದವರಿಗೆ ಸ್ಥಾನಮಾನ ಕೊಡಬೇಕು ಎಂದಾಗ ಬದಲಾವಣೆ  ಸಹಜ. ಮುಂದಿನ ದಿನಗಳಲ್ಲಿ ಪಕ್ಷ ಯಾವ ಕೆಲಸ ವಹಿಸುತ್ತದೆಯೋ ಅದನ್ನು ಮಾಡುತ್ತೇನೆ. ಸಂಘಟನೆಗೆ ಕರೆದರೂ ಹೋಗುತ್ತೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು