ಹುಬ್ಬಳ್ಳಿ: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಬೇಕೆಂದು ನನ್ನ ಅಭಿಪ್ರಾಯವಷ್ಟೇ ಹೇಳಿದ್ದೇನೆ. ಸಂವಿಧಾನ ನನಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕು ನೀಡಿದೆ’ ಎಂದು ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ಲೆವೆಲ್ ಕುರಿತು ಯಾರು ಏನೇ ಹೇಳಲಿ, ತೀರ್ಮಾನಿಸುವುದು ಜನರು ಮಾತ್ರ’ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.
‘ನಾನು ಒಕ್ಕಲಿಗ ಸಮುದಾಯದ ವಿರುದ್ಧ ಮಾತನಾಡಿಲ್ಲ. ಆ ಸಮುದಾಯದ ಸ್ವಾಮೀಜಿಗಳು ನನ್ನ ಹೇಳಿಕೆಯನ್ನು ಖಂಡಿಸಿಲ್ಲ. ಒಕ್ಕಲಿಗ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ನನ್ನನ್ನು ಇಷ್ಟಪಡುತ್ತಾರೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.