ಅಣ್ಣಿಗೇರಿ: ನವಲಗುಂದ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾರ್ಚ್ 15ರಂದು ಬೆಳಿಗ್ಗೆ 11 ಗಂಟೆಗೆ ಸ್ಥಳೀಯ ಎಪಿಎಂಸಿ ಹತ್ತಿರದ ಬಾಪೂಜಿ ಸದನದಲ್ಲಿ ಹಮ್ಮಿಕೊಳ್ಳಲು ಪಟ್ಟಣದಲ್ಲಿ ಗುರುವಾರ ಜರುಗಿದ ಜೆಡಿಎಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜೆಡಿಎಸ್ ಧಾರವಾಡ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ. ಗಂಗಾಧರಮಠ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹಾಗೂ ಬಿಜೆಪಿಯ ಜೊತೆ ಹೊಂದಾಣಿಕೆಯಾದರೆ ಹೊಂದಾಣಿಕೆ ಮಾಡಿಕೊಳ್ಳುವುದು ಇಲ್ಲವಾದರೆ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು.

ಜೆಡಿಎಸ್ ಶಕ್ತಿಯ ಬಗ್ಗೆ ಕೆಲವರಿಗೆ ಹಗುರ ಭಾವನೆಗಳಿದ್ದು ಅದನ್ನು ಚುನಾವಣೆಯಲ್ಲಿ ಎದುರಿಸಿ ಅಳಿಸಿ ಹಾಕೋಣ, ಪಕ್ಷದ ಶಕ್ತಿ ಏನು ಎನ್ನುವುದನ್ನು ತೋರಿಸೋಣ ಎಂದು ಹಲವು ಮುಖಂಡರು ಪ್ರತಿಪಾದಿಸಿದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರು ಹೊಂದಾಣಿಕೆ ಏನಿದ್ದರೂ ಅದು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಮಾತ್ರ. ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅವರ ನಿರ್ದೇಶನದಂತೆ ಮುಂದುವರಿಯಲಾಗುವುದು ಎಂದು ಹಿರಿಯ ಮುಖಂಡರು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಮಾಜಿ ಸಚಿವ ಕೆ.ಎನ್. ಗಡ್ಡಿ, ಮುಖಂಡರಾದ ಸಿ.ಎಸ್. ಪಾಟೀಲ, ಜಿ.ಎನ್. ತೋಟದ, ಎಂ.ಎಸ್. ಪಾಟೀಲ, ಶ್ರೀಶೈಲ ಮೂಲಿಮನಿ, ಶಿವಶಂಕರ ಕಲ್ಲೂರ, ಪ್ರಕಾಶ ಅಂಗಡಿ, ಡಿ.ಎಂ. ಶಲವಡಿ, ವೀರೇಶ ಶಾನುಭೋಗರ, ಮೌಲಾಸಾಬ ವೈದ್ಯ, ಮಂಜಪ್ಪ ಆಡಕಾವು, ಕಿರಣ ಬೂದಿಹಾಳ, ಡಿ.ಬಿ. ನರಗುಂದ, ಉಮೇಶ ನರಗುಂದಮಠ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.