ಭಾನುವಾರ, ಸೆಪ್ಟೆಂಬರ್ 19, 2021
23 °C

ರಸ್ತೆಯಲ್ಲಿ ಮಹಿಳೆಯ ಕೈ ಹಿಡಿದು ಎಳೆದಾಡಿದ ಜೆಡಿಎಸ್‌ ಮುಖಂಡ ಶ್ರೀಕಾಂತ ಜಮನಾಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಸತ್ತೂರಿನ ಎಸ್‌ಡಿಎಂ ದಂತ ವೈದ್ಯಕೀಯ ಕಾಲೇಜು ಬಳಿ ಜೆಡಿಎಸ್‌ ಮುಖಂಡ ಶ್ರೀಕಾಂತ ಜಮನಾಳ‌ ಮಹಿಳೆಯ ಕೈ ಹಿಡಿದು ನಡುರಸ್ತೆಯಲ್ಲೆ ಎಳೆದಾಡಿದ ಪ್ರಕರಣ ನಡೆದಿದೆ.

ಅನುಮತಿ ಅತ್ತಿಗೇರಿ ಎಂಬ ಮಹಿಳೆ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ, ಶ್ರೀಕಾಂತ ಮನೆಯೊಳಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ. ಗಲಾಟೆ ಬಿಡಿಸಲು ಬಂದವರಿಗೆ ಬೆದರಿಕೆ ಹಾಕಿರುವ ಅವರು, ಮಹಿಳೆಯನ್ನು ರಸ್ತೆಯಲ್ಲಿ ಎಳೆದಾಡಿದ್ದಾರೆ. ಈ ವಿಡಿಯೊ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಈ ಕುರಿತು ಅನುಮತಿ ಅತ್ತಿಗೇರಿ ಅವರು ಶುಕ್ರವಾರ ವಿದ್ಯಾಗಿರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು