ಧಾರವಾಡ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಉದ್ಯೋಗಾಕಾಂಕ್ಷಿಗಳು ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡದಿದ್ದರೂ ಪ್ರತಿಭಟನೆಗೆ ಮುಂದಾದ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮತ್ತು ರೈತ ಸಂಘಟನೆ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು. ನಂತರ ಬಿಡುಗಡೆ ಮಾಡಿದರು.

ಪೊಲೀಸ್ ಬಂದೋಬಸ್ತ್ ಇದ್ದರೂ ಪ್ರತಿಭಟನೆಗೆ ಮುಂದಾದ ಸಂಘಟನೆಗಳ ಮುಖಂಡರಾದ ಸಿದ್ದಲಿಂಗ ಬಾಗೇವಾಡಿ, ಭವಾನಿಶಂಕರ ಗೌಡ, ಲಕ್ಷ್ಮಣ ಜಡಗಣ್ಣವರ ಸೇರಿ ಆರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು, ವಾಹನದಲ್ಲಿ ಕರೆದೊಯ್ದರು. ರೈತ ಮುಖಂಡ ಶಂಕರಪ್ಪ ಅಂಬಲಿ, ಶರಣು ಸೇರಿ ಒಂಬತ್ತು ಹೋರಾಟಗಾರರನ್ನು ವಶಕ್ಕೆ ಪಡೆದರು.

ಈ ಎಲ್ಲದರ ನಡುವೆಯೇ ಪ್ರತಿಭಟನಾಕಾರರು, ‘ಒಳಮೀಸಲಾತಿ ಗೊಂದಲಗಳನ್ನು ಕೂಡಲೇ ಸರಿಪಡಿಸಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಿ’, ‘ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗೆ ವಯೋಮಿತಿ ಸಡಿಲಿಸಿ’ ಎಂದು ಆಗ್ರಹಿಸಿದರು.

‘ಕಾನೂನು ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪ್ರತಿಭಟನೆಗೆ ಅನುಮತಿ ನೀಡಿಲ್ಲ. ಮುಂಜಾಗ್ರತಾ ಕ್ರಮವಾಗಿ 15 ಸಂಘಟಕರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಿದ್ದೇವೆ’ ಎಂದು ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.

ಬಿಡುಗಡೆಯಾದ ಬಳಿಕ ಸಂಘಟನೆಗಳ ಮುಖಂಡರು, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಡಿ ಅವರನ್ನು ಭೇಟಿಯಾಗಿ ಮನವಿಪತ್ರ ಸಲ್ಲಿಸಿದರು. ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಮುಖ್ಯಮಂತ್ರಿ ಭೇಟಿಗೆ ಅವಕಾಶ ಕಲ್ಪಿಸುವಂತೆ ಕೋರಿದರು.

ಪ್ರತಿಭಟನೆಗೆ ತಡೆ: ಬಿಗಿ ಬಂದೋಬಸ್ತ್

ಖಾಲಿ ಹುದ್ದೆಗಳ ಭರ್ತಿಗಾಗಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಮತ್ತು ವಿವಿಧ ಸಂಘಟನೆಗೆಳು ಬುಧವಾರ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆ ತಡೆ ನಿಟ್ಟಿನಲ್ಲಿ ನಗರದ ವಿವಿಧೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಶ್ರೀನಗರ ಸಪ್ತಾಪುರ ಮುಖ್ಯರಸ್ತೆ ಭಾಗದಲ್ಲಿ ಮಧ್ಯಾಹ್ನದವರೆಗೆ ಭಾಗಶಃ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಸಪ್ತಾಪುರ ಪ್ರವೇಶ ಭಾಗ ಶ್ರೀನಗರ ವೃತ್ತ ಲಿಂಗಾಯತ ಭವನ ಭಾಗದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಶ್ರೀನಗರ ವೃತ್ತದ ಕಡೆಗೆ ಮಧ್ಯಾಹ್ನದವರೆಗೆ ನಗರ ಸಾರಿಗೆ ಬಸ್ ಸಂಚಾರ ಇರಲಿಲ್ಲ. ಸಂಚಾರ ನಿರ್ಬಂಧ ವಿಧಿಸಿದ್ದರಿಂದ ವಾಹನಗಳವರು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಿದರು. ‘ಶ್ರೀನಗರ ವೃತ್ತ ಸಮೀಪದ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮ ಇತ್ತು. ಬಸ್ ಇಲ್ಲಿಗೆ ಬರಲಿಲ್ಲ. ಸುಮಾರು ಒಂದೂವರೆ ಕಿಲೋ ಮೀಟರ್ ನಡೆದು ಬರಬೇಕಾಯಿತು’ ಎಂದು ಮಹಿಳೆಯೊಬ್ಬರು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ

ಸಲ್ಲಿಕೆ ಪ್ರತಿಭಟನೆಗೆ ಸಜ್ಜಾಗಿದ್ದ 15 ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಸಂಜೆ ಬಿಡುಗಡೆಗೊಳಿಸಿದರು. ಈ ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿ ಮುಂಭಾಗಕ್ಕೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರಿಗೆ ಮನವಿ ಸಲ್ಲಿಸಿದರು. ‘ನೇಮಕಾತಿಗೆ ಸರ್ಕಾರ ಕ್ರಮ ವಹಿಸದಿದ್ದರೆ ಹೋರಾಟ ಮುಂದುವರಿಸುತ್ತೇವೆ ಎಂದು ರೈತ ಮುಖಂಡ ಸಿದ್ದನಗೌಡ ಮೂದಲಗಿ ತಿಳಿಸಿದರು. ಶಂಕರಪ್ಪ ಅಂಬಲಿ ಮಧುಲತಾ ಗೌಡರ್ ಶರಣು ಗೊನವರ ಭವಾನಿ ಶಂಕರಗೌಡ ಇದ್ದರು.

ಬೇಡಿಕೆಗಳು

ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು. ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗೆ ವಯೋಮಿತಿ ಎಸ್.ಸಿ ಎಸ್.ಟಿ ಒಬಿಸಿಗೆ 33 ವರ್ಷಕ್ಕೆ ಹಾಗೂ ಸಾಮಾನ್ಯ ವರ್ಗಕ್ಕೆ 30 ವರ್ಷಕ್ಕೆ ಸಡಿಲಿಸಬೇಕು. ಅರ್ಜಿ ಶುಲ್ಕ ವಿಧಿಸಬಾರದು. ಪರೀಕ್ಷಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಧಾರವಾಡದ ಜಯನಗರ ಸಪ್ತಾಪುರ ಶ್ರೀನಗರ ಕಲ್ಯಾಣನಗರ ಭಾಗದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.