ಶನಿವಾರ, ಜನವರಿ 28, 2023
13 °C

ರಸ್ತೆ ಕಾಮಗಾರಿ: ಗಡ್ಕರಿ ಜೊತೆ ಜೋಶಿ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಬೈಪಾಸ್ ವಿಸ್ತರಣೆ ಸೇರಿದಂತೆ ವಿವಿಧ ರಸ್ತೆ ಕಾಮಗಾರಿಗಳ ಕುರಿತು ಸಚಿವ ಪ್ರಲ್ಹಾದ ಜೋಶಿ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ದೆಹಲಿಯಲ್ಲಿ ಬುಧವಾರ  ಚರ್ಚಿಸಿದರು.

ಬೈಪಾಸ್ ವಿಸ್ತರಣೆಯ ಟೆಂಡರ್‌ಗೆ ಈಗಾಗಲೇ ಅನುಮೋದನೆ ದೊರಕಿದ್ದು, ಕಾಮಗಾರಿಯನ್ನು ಶೀಘ್ರವೇ ಪ್ರಾರಂಭಿಸಬೇಕು ಎಂದು ಗಡ್ಕರಿ ಅವರು ಸೂಚನೆ ನೀಡಿದರು. ಅವಳಿ ನಗರದ ಸುತ್ತಲಿರುವ ಚತುಷ್ಪಥ ಮತ್ತು ಷಟ್ಪಥಗಳಿಗೆ ಅಂಡರ್‌ಪಾಸ್‌ಗಳನ್ನು ನಿರ್ಮಾಣ ಮಾಡಿ ಕೊಡುವುದಾಗಿ ಭರವಸೆ ನೀಡಿದರು ಎಂದು ಜೋಶಿ ಅವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಭೇಟಿ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು