ಶುಕ್ರವಾರ, ಡಿಸೆಂಬರ್ 4, 2020
23 °C

ನೂತನ ಡಿಸಿಪಿಯಾಗಿ ರಾಮರಾಜನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಅವಳಿನಗರ ಪೊಲೀಸ್ ಕಮಿಷನರೇಟ್‌ನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿ ಕೆ. ರಾಮರಾಜನ್ ಅವರನ್ನು ಒಒಡಿ ಮೇಲೆ ನಿಯೋಜಿಸಿ, ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿರುವ ರಾಮರಾಜನ್ ಅವರಿಗೆ, ಮುಂದಿನ ಆದೇಶದವರೆಗೆ ಈ ಹುದ್ದೆಯಲ್ಲಿ ಮುಂದುವರಿಯುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಸದ್ಯ ಖಾಲಿ ಇದ್ದ ಡಿಸಿಪಿ ಹುದ್ದೆಯ ಹೆಚ್ಚುವರಿ ಹೊಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ್ ಅವರಿಗೆ ವಹಿಸಲಾಗಿತ್ತು. ಇದೀಗ ಆ ಜಾಗಕ್ಕೆ ಬಂದಿರುವ ರಾಮರಾಜನ್ ತಮಿಳುನಾಡಿನವರಾಗಿದ್ದು, 2017ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು