ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ಬೆಳೆಗಾರರ ಸಂಘದಿಂದ ಪಂಜಿನ ಮೆರವಣಿಗೆ

Published 14 ಮಾರ್ಚ್ 2024, 14:51 IST
Last Updated 14 ಮಾರ್ಚ್ 2024, 14:51 IST
ಅಕ್ಷರ ಗಾತ್ರ

ಕಲಘಟಗಿ: ರೈತರ ಬೇಡಿಕೆ ಈಡೇರಿಸದ ಕೇಂದ್ರ ಸರ್ಕಾರದ ನಡೆ ಖಂಡಿಸಿ ಮತ್ತು ರೈತ ಹೋರಾಟದಲ್ಲಿ ಹುತಾತ್ಮರಾದ ಆರು ಜನ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲು ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಪಟ್ಟಣದಲ್ಲಿ ಬುಧವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು.

ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ಪರಶುರಾಮ ಎತ್ತಿನಗುಡ್ಡ ಮಾತನಾಡಿ, ‘ಎಂ.ಎಸ್.ಪಿ ಗ್ಯಾರಂಟಿ ಕಾನೂನು ಜಾರಿ, ರೈತರ ಸಾಲ ಮನ್ನಾ ಮಾಡಬೇಕು, ಸ್ವಾಮಿನಾಥನ್‌ ಆಯೋಗದ ವರದಿ ಜಾರಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಹೋರಾಟ ಒಂದು ತಿಂಗಳು ಪೂರೈಸಿದರೂ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರ ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ರೈತರ ಬೇಡಿಕೆ ಈಡೇರಿಸಲು ಸಂಪೂರ್ಣ ವಿಫಲವಾಗಿದೆ’ ಎಂದು ದೂರಿದರು.   

ರೈತ ಮುಖಂಡರಾದ ಉಳವಪ್ಪ ಬಳಿಗೇರ, ವಸಂತ ಡಾಕಪ್ಪನವರ, ಬಸನಗೌಡ ಪಾಟೀಲ, ಮಾಳಪ್ಪ ಹೊನ್ನಿಹಳ್ಳಿ, ಮಲ್ಲೇಶ ಜಿನ್ನೂರ ಇದ್ದರು.

ಕಲಘಟಗಿಯಲ್ಲಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿದರು 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT