ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶಾಭಿಮಾನ, ಧರ್ಮಾಭಿಮಾನ ಬೆಳೆಸಿಕೊಳ್ಳಿ’

Published 15 ಏಪ್ರಿಲ್ 2024, 15:35 IST
Last Updated 15 ಏಪ್ರಿಲ್ 2024, 15:35 IST
ಅಕ್ಷರ ಗಾತ್ರ

ಕಲಘಟಗಿ: ‘ಮನುಷ್ಯ ಸ್ವಾಭಿಮಾನ ಬಿಟ್ಟು ಬದುಕುತ್ತಿರುವುದರಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ. ಪ್ರತಿಯೊಬ್ಬರು ದೇಶಾಭಿಮಾನ ಮತ್ತು ಧರ್ಮಾಭಿಮಾನ ಬೆಳೆಸಿಕೊಳ್ಳಬೇಕು’ ಎಂದು ಬಾಳೆಹೊನ್ನೂರಿನ ರಂಭಾಪುರಿ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಸಂಗೇದೇವರಕೊಪ್ಪ ಗ್ರಾಮದಲ್ಲಿ ಸಂಗಮೇಶ್ವರ ಮತ್ತು ನಂದೀಶ್ವರ ದೇವಾಲಯ  ಉದ್ಘಾಟನೆ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

‘ಜಗತ್ತಿಗೆ ಬೆಳಕು ತೋರುವ ಜೀವನ ಸಾಗಿಸಿದ ಆಚಾರ್ಯರು ಮತ್ತು ಸಂತರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು. ರೇಣುಕಾಚಾರ್ಯರು  ಅನೇಕ ನೀತಿ ಸೂತ್ರಗಳನ್ನು ನೀಡಿದ್ದು ಅವುಗಳನ್ನು ಪರಿಪಾಲಿಸಬೇಕು’ ಎಂದರು.

ರಂಭಾಪುರಿ ಸ್ವಾಮೀಜಿ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು. ಉತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ಅನ್ನ ದಾಸೋಹ ಜರುಗಿತು.

ಮುಕ್ತಿಮಂದಿರದ ವಿಮಲರೇಣುಕ ಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ, ಶಿರಕೋಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಲಘಟಗಿ ಹನ್ನೆರಡು ಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಸುಳ್ಳದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ರಾಯನಾಳ ಅಭಿನವ ರೇವಣಸಿದ್ದೇಶ್ವರ ಸ್ವಾಮೀಜಿ ಉಪದೇಶ ನೀಡಿದರು.

ಶಂಕರಯ್ಯ ಹಿರೇಮಠ ಹಾಗೂ ಈರಯ್ಯ ಗುರನಳ್ಳಿಮಠ ಇವರು ದೇವತಾ ಪ್ರತಿಷ್ಠಾಪನೆಯ ಕಾರ್ಯ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT