ಗುರುವಾರ , ಏಪ್ರಿಲ್ 2, 2020
19 °C

ಚಿರತೆ ದಾಳಿಗೆ ಆಕಳ ಕರು ಬಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಘಟಗಿ: ತಾಲ್ಲೂಕಿನ ಬೆಂಡಲಗಟ್ಟಿ ಗ್ರಾಮದಲ್ಲಿ ಶನಿವಾರ ರಾತ್ರಿ ಚಿರತೆಯೊಂದು ದಾಳಿ ಮಾಡಿ ಆಕಳ ಕರುವನ್ನು ಎಳೆದೊಯ್ದು ತಿಂದು ಹಾಕಿದೆ.

ಕಲಘಟಗಿ ಪಟ್ಟಣದ ಸಮೀಪ ಇರುವ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಹುಲಗಿನಕಟ್ಟಿ ಗ್ರಾಮದ ಶಾಂತವ್ವ ಹನುಮಂತಪ್ಪ ಭಜಂತ್ರಿ ಅವರಿಗೆ ಸೇರಿದ ಹೊಲದ ಗುಡಿಸಿಲಿನಲ್ಲಿ ಎರಡು ಆಕಳು ಇದ್ದವು, ಅದರಲ್ಲಿ ಆಕಳ ಕರುವನ್ನು ಚಿರತೆ ತಿಂದು ಹಾಕಿದೆ.

ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪ‍ರಿಶೀಲನೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ದಾಳಿ ನಡೆಸಿರುವುದನ್ನು ಖಚಿತ ಪಡಿಸಿದರು.

ಚಿರತೆಯನ್ನು ಹಿಡಿದು ಬೇರೆ ಕಡೆ ಸಾಗಿಸಬೇಕು ಎಂದು ಗ್ರಾಮಸ್ಥರಾದ ಗಿರೀಶ ಭಜಂತ್ರಿ, ಪ್ರಭುಜನ ಹುಲಿಕಟ್ಟಿ, ನವೀನ ಹುಲಿಕಟ್ಟಿ, ಮನೋಜ ಹುಲಿಕಟ್ಟಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದರು.

ಚಿರತೆ ಹಿಡಿಯುವ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದು ಕಾರ್ಯಾಚರಣೆ ಮಾಡಿ ಬೇರೆ ಕಡೆ ಸ್ಥಳಾಂತರಿಸಲಾಗುವುದು ಹಾಗೂ ರೈತರಿಗೆ ಸರ್ಕಾರದಿಂದ ಪರಿಹಾರ ಧನ ನೀಡಲಾಗುವುದು ಎಂದು ತಾಲ್ಲೂಕು ವಲಯ ಅರಣ್ಯ ಅಧಿಕಾರಿ ಶ್ರೀಕಾಂತ ಪಾಟೀಲ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು