ಕಲಘಟಗಿ: ಫಸಲ ಭೀಮಾ ಬೆಳೆ ವಿಮೆಯಲ್ಲಿ ತಾರತಮ್ಯ ಮಾಡಿ ರೈತರಿಗೆ ಅನ್ಯಾಯ ಮಾಡಿದವರ ವಿರುದ್ಧ ಅಧಿಕಾರಿ ವರ್ಗದವರು ಕಾಲಹರಣ ಮಾಡದೇ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕು. ವಿಮೆ ತುಂಬಿದ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಸೋಮನಕೊಪ್ಪ ಸಿದ್ದಾರೂಢ ಆಶ್ರಮದ ನಿರ್ಗುಣಾನಂದ ಸ್ವಾಮಿಜಿ ಆಗ್ರಹಿಸಿದರು.

ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ಬೆಳೆ ವಿಮೆಯಲ್ಲಿ ಆದ ತಾರತಮ್ಯದ ತನಿಖೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ನಡೆಸುತ್ತಿರುವ 11ನೇ ದಿನದ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು.

ಹಗಲಿರುಳು ಬೆವರು ಸುರಿಸಿ ದುಡಿಯುವ ಅನ್ನದಾತನಿಗೆ ಮೋಸ ಮಾಡುವುದು ಸಮಂಜಸವಾಗದು. ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ರೈತರ ನೆರವಿಗೆ ಧಾವಿಸಿ ಹೋರಾಟಕ್ಕೆ ಪಕ್ಷಾತೀತವಾಗಿ ಎಲ್ಲರೂ ಬೆಂಬಲ ನೀಡಬೇಕು ಎಂದರು.

ತಾಲ್ಲೂಕಿನ ದೇವರಕೊಂಡ ಗ್ರಾಮದ ಬಾಲಯೋಗಿ ಮಾಣಿಕ್ ವೃಷಭೇಂದ್ರ ಸ್ವಾಮೀಜಿ ಮಾತನಾಡಿ, ‘ರೈತರ ಹೋರಾಟಕ್ಕೆ ಬೆಂಬಲಿಸಿ ಧರ್ಮದ ಹಾದಿಯಲ್ಲಿ ಸಾಗಿದರೆ ನಿಮಗೆ ಮೋಕ್ಷ ಪ್ರಾಪ್ತಿಯಾಗುತ್ತದೆ. ರೈತರ ಮನಸ್ಸು ನೋಯಿಸಿದರೆ ನಿಮಗೆ ಪಾಪ ಕರ್ಮಗಳು ಹೆಚ್ಚಾಗುತ್ತವೆ. ಕೆಲವೊಂದು ಅಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ, ಅವರಿಗೆ ವಿಮೆ ಹಣ ಬಂದಿದೆ ಎಂದು ಕೇಳುವವರಿಲ್ಲದಂತಾಗಿದೆ‘ ಎಂದು ಹೇಳಿದರು.

ಏಜೆಂಟರ ಮೂಲಕ ಹಣ ಜಮೆ ಮಾಡಿಸಿ ಶೇ 50ರಷ್ಟು ಕಮಿಷನ್ ಪಡೆಯುತ್ತಿರುವುದು ದೇಶದ ಅನ್ನದಾತನಿಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಖಂಡಿಸಿದರು.

ಪಟ್ಟಣದ ಹನ್ನೆರಡು ಮಠದ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ ಅವರು ಹೋರಾಟವನ್ನು ಬೆಂಬಲಿಸಿ ಮಾತನಾಡಿ, 11 ದಿನಗಳ ಕಾಲ ನಿರಂತರ ಹೋರಾಟ ಮಾಡುತ್ತಿರುವುದು ರೈತರ ಒಗ್ಗಟ್ಟು ತೋರಿಸಿಕೊಡುತ್ತದೆ. ಮುಂದೆ ಇಂತಹ ಘಟನೆಗಳು ಮರುಕಳಿಸಿದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.

ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗುರುನಾಥ ಬಸನಗೌಡ್ರ ಮಾತನಾಡಿ, ‘ಅಧಿಕಾರಿಗಳಿಂದ ನಮಗೆ ಸರಿಯಾಗಿ ಉತ್ತರ ಕೊಡದಿದ್ದರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಮನೆ ಮುಂದೆ ಹೋರಾಟ ಮಾಡುವ ನಿರ್ಧಾರಕ್ಕೆ ಬಂದಿದ್ದೇವೆ’ ಎಂದರು.

ಭಾರತೀಯ ಕಿಸಾನ್ ಸಂಘದ ತಾಲ್ಲೂಕ ಅಧ್ಯಕ್ಷ ಸಿದ್ದಪ್ಪ ಬೆಟಗೇರಿ, ಸಂಗ್ರಾಮ ಸೇನೆ ತಾಲ್ಲೂಕ ಅಧ್ಯಕ್ಷ ಸಾತಪ್ಪ ಕುಂಕೂರ, ಚಂದ್ರಗೌಡ ಪಾಟೀಲ, ಶಂಕರಗೌಡ ಪಾಟೀಲ, ಶಶಿಧರ ಹುಲಿಕಟ್ಟಿ, ಪರಶುರಾಮ ಹುಲಿಹೊಂಡ,ಬಸವರಾಜ ಕಟ್ಟಿಮನಿ, ನಿಂಗಪ್ಪ ಕಳ್ಳಿಮನಿ, ಶಿವಪ್ಪ ಲಂಬಾಣಿ,ಬಸವಣ್ಣಪ್ಪ ಬಸನಕೊಪ್ಪ, ಬಸವರಾಜ ತಾವರಗೇರಿ ಹೋರಾಟದಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-467682925

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.