ಕಲಘಟಗಿ: ಮುಂಗಾರು ಹಂಗಾಮಿನ ಬೆಳೆವಿಮೆ ಹಣ ಬಿಡುಗಡೆಯಲ್ಲಿ ರೈತರಿಗೆ ಆಗಿರುವ ಅನ್ಯಾಯ ಖಂಡಿಸಿ ಭಾರತೀಯ ಕಿಸಾನ್ ಸಂಘ ಹಾಗೂ ವಿವಿಧ ಸಂಘಟನೆ ಬೆಂಬಲದಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂದೆ ನಡೆಸುತ್ತಿರುವ ಅಹೋರಾತ್ರಿ ಹೋರಾಟ ಎರಡನೇ ದಿನವೂ ಮುಂದುವರಿದಿದೆ. ಅಧಿಕಾರಿಗಳು ರೈತರ ಮನವೊಲಿಸಲು ಪ್ರಯತ್ನ ಮಾಡಿದರೂ ರೈತರು ಪ್ರತಿಭಟನೆ ಹಿಂದಕ್ಕೆ ಪಡೆಯಲಿಲ್ಲ.

ಬಿಜೆಪಿ ಮುಖಂಡ ನಾಗರಾಜ ಛಬ್ಬಿ ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿ, ‘ಬೆಳೆವಿಮೆ ಜಮೆ ಮಾಡುವಲ್ಲಿ ತಾಲ್ಲೂಕಿನ ರೈತರಿಗೆ ಆಗಿರುವ ಅನ್ಯಾಯವನ್ನು ನಾವು ಸಹಿಸಲ್ಲ. ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡದೇ ಸಂಪೂರ್ಣ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಿ‘ ಎಂದು ಆಗ್ರಹಿಸಿದರು.

ಸ್ಥಳಕ್ಕೆ ಜಿಲ್ಲಾ ಕೃಷಿ ಉಪ ನಿರ್ದೇಶಕ ನಟರಾಜ, ತಹಶೀಲ್ದಾರ್ ಬಸವರಾಜ ಹೊಂಕಣ್ಣದವರ, ಸಹಾಯಕ ಕೃಷಿ ನಿರ್ದೇಶಕ ಅಮರ ನಾಯ್ಕರ ಹಾಗೂ ಸಿಪಿಐ ಶ್ರೀಶೈಲ್ ಕೌಜಲಗಿ ಭೇಟಿ ನೀಡಿ 20 ದಿನಗಳ ಒಳಗಾಗಿ ಬೆಳೆವಿಮೆಯಲ್ಲಿ ರೈತರಿಗೆ ಆಗಿರುವ ಲೋಪ ದೋಷಗಳ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿ ಹೋರಾಟ ಹಿಂಪಡೆಯಲು ತಿಳಿಸಿದರು.

ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಗುರುನಾಥಗೌಡ್ರ ಬಸನಗೌಡ್ರ ಮಾತನಾಡಿ, ಈಗಾಗಲೇ 15 ದಿನಗಳ ಕಾಲ ಗಡುವು ನೀಡಲಾಗಿತ್ತು. ಆದರೂ ಕ್ರಮ ಜರುಗಿಸಿಲ್ಲ. ನಿಮ್ಮ ನಿರ್ಲಕ್ಷದಿಂದ ನಾವು ಹೋರಾಟ ಮಾಡುತ್ತಿದ್ದೇವೆ. ನಮಗೆ ನ್ಯಾಯ ಸಿಗುವವರಿಗೆ ಹೋರಾಟ ಕೈಬಿಡುವುದಿಲ್ಲ ಎಂದರು.

ಮುಖಂಡರಾದ ಐ.ಸಿ ಗೋಕುಲ, ಶಶಿಧರ ಹುಲಿಕಟ್ಟಿ, ಶಂಕರಗೌಡ ಪಾಟೀಲ, ಈಶ್ವರ ಜಾಯನಗೌಡ್ರ, ಬಸವರಾಜ ತಿಪ್ಪಣ್ಣವರ, ಪಕ್ಕೀರೇಶ ನೇಸ್ರೆಕರ, ಚಂದ್ರಗೌಡ ಪಾಟೀಲ, ಮಂಜುನಾಥ ಮಾಳಗಿ, ಪರಶುರಾಮ ಹುಲಿಹೊಂಡ, ಕಲ್ಲಪ್ಪ ಪುಟ್ಟಪ್ಪನವರ, ನಾಗಪ್ಪ ಕನಕಪ್ಪನವರ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-24-1134380952

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.