ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಘಟಗಿ ಪ.ಪಂ, ನವಲಗುಂದ ಪುರಸಭೆ: ತಲಾ 1 ಸ್ಥಾನಕ್ಕೆ ಉಪಚುನಾವಣೆ; 27ರಂದು ಮತದಾನ

Published 8 ಡಿಸೆಂಬರ್ 2023, 5:31 IST
Last Updated 8 ಡಿಸೆಂಬರ್ 2023, 5:31 IST
ಅಕ್ಷರ ಗಾತ್ರ

ಧಾರವಾಡ: ವಿವಿಧ ಕಾರಣಗಳಿಂದ ತೆರವಾದ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಜಿಲ್ಲೆಯ ಕಲಘಟಗಿ ಪಟ್ಟಣ ಪಂಚಾಯಿತಿ ಹಾಗೂ ನವಲಗುಂದ ಪುರಸಭೆಯ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಕಲಘಟಗಿಯ ಪಟ್ಟಣ ಪಂಚಾಯಿತಿ ಒಂದನೇ ವಾರ್ಡ್‌ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಇದೆ. ನವಲಗುಂದ ಪುರಸಭೆಯ 23ನೇ ವಾರ್ಡ್‌ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಸ್ಥಾನ ಸಾಮಾನ್ಯ ಮಹಿಳೆ ಮೀಸಲಾತಿ ಇದೆ. ಉಪಚುನಾವಣೆ ವೇಳಾಪಟ್ಟಿ ಇಂತಿದೆ.

ಡಿಸೆಂಬರ್‌ 8ರಂದು ಅಧಿಸೂಚನೆ ಪ್ರಕಟಿಸಲಾಗುವುದು. ನಾಮಪತ್ರ ಸಲ್ಲಿಸಲು ಕೊನೆಯ ದಿನ ಡಿ. 15. ನಾಮಪತ್ರಗಳನು ಪರಿಶೀಲನೆ ಡಿ.16ರಂದು ನಡೆಯಲಿದೆ. ನಾಮಪತ್ರ ಹಿಂಪಡೆಯಲು ಡಿ.18 ಕಡೆಯ ದಿನ. ಡಿ.27ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದೆ. ಮರು ಮತದಾನ ಅಗತ್ಯ ಇದ್ದರೆ ಡಿಸೆಂಬರ್ 29ರಂದು ನಡೆಯಲಿದೆ.

ತಾಲ್ಲೂಕು ಆಯಾ ಕೇಂದ್ರಗಳಲ್ಲಿ ಡಿ.30ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ನಡೆಯಲಿದೆ. ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಡಿ.8ರಿಂದ 30ರವರೆಗೆ ನೀತಿ ಸಂಹಿತ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT