ಕಲಘಟಗಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ ಆಗ್ರಹಿಸಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಂತೋಷ ಲಾಡ್ ಅವರು ನಾಲ್ಕು ಬಾರಿ ಶಾಸಕರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಹಾಗೂ ರಾಜ್ಯದ ಕಾರ್ಮಿಕ ಸಚಿವರಾಗಿ ಬದ್ಧತೆಯಿಂದ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಹಾಗೂ ರಾಜ್ಯ ಸರ್ಕಾರ ನೀಡಿದ ಹಲವು ಅಭಿವೃದ್ದಿ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಿದ್ದಾರೆ. ಜನರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು ಕಷ್ಟ ಸುಖದಲ್ಲಿ ಬಾಗಿಯಾಗಿದ್ದಾರೆ ಎಂದರು.

ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನಕ್ಕೆ ಸಿದ್ದವಾಗಿರುವ ಡಿ.ಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಂತೋಷ್ ಲಾಡ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿದರೆ ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ನಿರ್ವಹಿಸುತ್ತಾರೆ ಎಂದು ಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳ ಪರವಾಗಿ ಸರ್ಕಾರಕ್ಕೆ ಒತ್ತಾಯಿಸಿದರು.

ಮುಖಂಡರಾದ ಮುಕುಂದಪ್ಪ ಅಂಚಟಗೇರಿ,ಗುರುನಾಥ ಕಂಪ್ಲಿ, ವೃಷಭಂದ್ರೆ ಪಟ್ಟಣಶೆಟ್ಟಿ, ಶಕುಂತಲಾ ಬೋಳಾರ, ಶಿವಪುತ್ರಪ್ಪ ಆಲದಕಟ್ಟಿ, ಬಸವರಾಜ ಬಾವಕರ, ಸೋಮಶೇಖರ್ ಬೆನ್ನೂರ,ಬಾಳು ಖಾನಾಪುರ, ಗಿರೀಶ್ ಸೂರ್ಯವಂಶಿ, ಸಿದ್ದು ತಲಬಾಗಿಲು,ಬಸವರಾಜ ದಾಸನಕೊಪ್ಪ, ಹನುಮಂತ ಕಾಳೆ, ಮಹೇಶ್ ಅಲಗೂರ, ಹನುಮಂತ ಚವರಗುಡ್ಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-24-908111313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.