ಧಾರವಾಡ: ಕವಿ ಡಾ. ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ.

ಕಣವಿ ಅವರಿಗೆ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಿರುವುದಾಗಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಎಸ್‌ಡಿಎಂ ಆಸ್ಪತ್ರೆಯು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಿದೆ.

ಜ್ವರದಿಂದ ಬಳಲುತ್ತಿದ್ದ ಡಾ. ಕಣವಿ ಅವರನ್ನು ಜನವರಿ 14ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಕೋವಿಡ್–19 ಸೋಂಕು ಇರುವುದು ದೃಢಪಟ್ಟಿತ್ತು. ಅಲ್ಲಿಂದ ಅವರಿಗೆ ನಿರಂತರವಾಗಿ ವೈದ್ಯಕೀಯ ಆಮ್ಲಜನಕ ನೀಡಲಾಗುತ್ತಿದೆ. ಮಂಗಳವಾರ 8 ಲೀ ಆಮ್ಲಜನವನ್ನು ಅವರಿಗೆ ನೀಡಲಾಗಿದೆ.

ಡಾ. ಕಣವಿ ಅವರ ಆಸ್ಪತ್ರೆ ವೆಚ್ಚ ಭರಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ:ಕಣವಿ ವೈದ್ಯಕೀಯ ವೆಚ್ಚ ಭರಿಸಿ: ಮಹೇಶ ಜೋಶಿ ಆಗ್ರಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.