ಸೋಮವಾರ, ಮೇ 23, 2022
24 °C

ಕರಿಯಮ್ಮ ದೇವಿ ಪಲ್ಲಕ್ಕಿ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಘಟಗಿ: ತಾಲ್ಲೂಕಿನ ಮಿಶ್ರಿಕೋಟಿ ಗ್ರಾಮದ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಕರಿಯಮ್ಮ ದೇವಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನೆರೆವೇರಿತು.

ಸೋಮವಾರ ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ, ಕುಂಭಮೇಳ, ಡೊಳ್ಳಿನ ಮಜಲು ವಾದ್ಯಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಜರುಗಿತು.

ಗ್ರಾಮದಲ್ಲಿ ದೇವಿಯ ಮೆರವಣಿಗೆ ತೆರಳುತ್ತಿದ್ದಂತೆ ಎಲ್ಲರೂ ದೇವಿಗೆ ಪೂಜೆ ಸಲ್ಲಿಸಿ ಭಕ್ತಿಯಿಂದ ಬೇಡಿಕೊಂಡರು. ಮಂಗಳವಾರ ದೇವಿಗೆ ಹೋಮ, ಹವನ, ಮಹಿಳೆಯರಿಂದ ಉಡಿ ತುಂಬುವ ಕಾರ್ಯಕ್ರಮ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು