ಬುಧವಾರ, ಏಪ್ರಿಲ್ 21, 2021
25 °C

ಚಂದ್ರಶೇಖರ ವಸ್ತ್ರದಗೆ ‘ಕರ್ಕಿ ಕಾವ್ಯ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಸಾಹಿತಿ ಚಂದ್ರಶೇಖರ ವಸ್ತ್ರದ ಅವರ ‘ಅರಿವು ಅಕ್ಷರದಾಚೆ’ ವಚನ ಚೌಪದಿ ಕೃತಿಗೆ 2019ನೇ ಸಾಲಿನ ಡಾ.ಡಿ.ಎಸ್.ಕರ್ಕಿ ಕಾವ್ಯ ಪ್ರಶಸ್ತಿ ಲಭಿಸಿದೆ.

₹ 10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡ ಈ ಪ್ರಶಸ್ತಿಯನ್ನು ಡಿ.14ರಂದು ಸಂಜೆ 6ಕ್ಕೆ ಹುಬ್ಬಳ್ಳಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಡಾ.ಡಿ.ಎಸ್‌.ಕರ್ಕಿ ಸಾಹಿತ್ಯ ವೇದಿಕೆ ಅಧ್ಯಕ್ಷ ಎಂ.ಎ.ಸುಬ್ರಹ್ಮಣ್ಯ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಾಹಿತಿಗಳಾದ ಗುರುಲಿಂಗ ಕಾಪಸೆ, ದೊಡ್ಡರಂಗೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಚಿಂತಕ ಪ್ರೊ.ಬಸವರಾಜ ಜಗಜಂಪಿ ವಸ್ತ್ರದ ಅವರ ಕೃತಿಯ ಕುರಿತು ಮಾತನಾಡಲಿದ್ದಾರೆ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು