ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ ಎಸ್‌ಡಿಎಂ ಕಾಲೇಜು: ಮತ್ತೆ 116 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢ

Last Updated 26 ನವೆಂಬರ್ 2021, 4:36 IST
ಅಕ್ಷರ ಗಾತ್ರ

ಧಾರವಾಡ: ಇಲ್ಲಿನ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಮತ್ತೆ 116 ವಿದ್ಯಾರ್ಥಿಗಳಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆಯಾಗಿದೆ. ಗುರುವಾರ 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿತ್ತು.

ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು. ಅವರೂ ಕೋವಿಡ್ ಪರೀಕ್ಷೆಗೆ ಒಳಪಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ... ಕೋವಿಡ್ ಹೊಸ ರೂಪಾಂತರ: ಪರೀಕ್ಷೆ, ತೀವ್ರ ತಪಾಸಣೆಗೆ ರಾಜ್ಯಗಳಿಗೆ ಕೇಂದ್ರ ಸೂಚನೆ

ಗುರುವಾರ ಸಂಜೆಯವರೆಗೆ ಎಸ್ ಡಿ ಎಂ ಆವರಣದ 690 ಜನರನ್ನು ಆರ್‌ಟಿಪಿಸಿಆರ್‌ ಹಾಗೂ ಆರ್‌ಎಟಿ ತಪಾಸಣೆಗೆ ಒಳಪಡಿಸಲಾಗಿದೆ. ಕಿಮ್ಸ್, ಡಿಮ್ಹಾನ್ಸ್ ಹಾಗೂ ಎಸ್‌ಡಿಎಂನ ಕೋವಿಡ್ ಪ್ರಯೋಗಾಲಯಗಳಲ್ಲಿ ಈ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಎಲ್ಲ ಸೊಂಕಿತರು ಹಿಂದೆಯೇ ಕೋವಿಡ್ ನಿರೋಧಕ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ. ಯಾರಲ್ಲಿಯೂ ರೋಗದ ಗಂಭೀರ ಸ್ವರೂಪದ ಲಕ್ಷಣಗಳಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇದುವರೆಗೆ ಎಸ್‌ಡಿಎಂ ಆವರಣದಿಂದ ಹೊರಗೆ ಎಲ್ಲಿಯೂ ಪ್ರಕರಣಗಳೂ ವರದಿಯಾಗಿಲ್ಲ. ಹುಬ್ಬಳ್ಳಿ ಧಾರವಾಡ ಅವಳಿನಗರ ಹಾಗೂ ಜಿಲ್ಲೆಯ ಸಾರ್ವಜನಿಕರಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಸ್ವ್ಯಾಬ್ ನೀಡಿ, ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು. ಕೋವಿಡ್ ನಿಯಂತ್ರಣಕ್ಕೆ ಈ ಮುನ್ನೆಚ್ಚರಿಕೆಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT