ಹುಬ್ಬಳ್ಳಿ: ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಅಹಿಂದ ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟದ ಅಧ್ಯಕ್ಷ ಸಿದ್ದಣ್ಣ ತೇಜಿ ಹೆಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ 80ರಷ್ಟು ಅಹಿಂದ ವರ್ಗ ಪಕ್ಷಾತೀತವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ. ಹೀಗಾಗಿ ಮುಸ್ಲಿಂ, ಕುರುಬ, ಪರಿಶಿಷ್ಟ ಜಾತಿ ಮತ್ತು ಪರಿಶಿಕ್ಷಣ ಸಮುದಾಯಗಳಿಗೆ ತಲಾ ಒಂದೊಂದು ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು ಎಂದರು.

ಅಹಿಂದ ಸಮುದಾಯಗಳಿಗೆ 20ರಿಂದ 22 ಸಚಿವ ಸ್ಥಾನ ನೀಡಬೇಕು. ಈ ಬಗ್ಗೆ ಕಾಂಗ್ರೆಸ್ ವರಿಷ್ಠರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಪುತ್ರನಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಅದು ಕುಟುಂಬ ರಾಜಕಾರಣವಾಗುತ್ತದೆ. ಅದರ ಬದಲು ಕುರುಬ ಸಮಾಜದ ರಾಘವೇಂದ್ರ ಹಿಟ್ನಾಳ ಅಥವಾ ಬಸವರಾಜ ಶಿವಣ್ಣವರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಅಹಿಂದ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡದಿದ್ದರೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತದೆ. ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಹೆಚ್ಚಿನ ಆದ್ಯತೆ ನೀಡದಿದ್ದರೆ ಜೂನ್ 7ರಂದು ಬೆಂಗಳೂರಿನಲ್ಲಿ ಅಹಿಂದ ಸಂಘಟನೆಗಳ ಸಭೆ ನಡೆಸಿ, ಮುಂದಿನ ಹೋರಾಟದ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

ಸುಜಾತಾ ಸನದಿ, ಕೆ.ಎಫ್.ಇಬ್ರಾಹಿಂಪುರ, ಹನುಮಂತಪ್ಪ ಕೌಜಗೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-22-848535189

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.