ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಲಿಪಾಡ್ಯಮಿ ದಿನವಾದ ಶುಕ್ರವಾರ ನಗರದಲ್ಲಿ ತಮ್ಮ ಸ್ನೇಹಿತರ ಹಾಗೂ ಆಪ್ತರ ಜೊತೆ ಕಳೆದು, ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೀಪಾವಳಿ ಆಚರಿಸಿದರು.

ಎರಡು ದಿನಗಳಿಂದ ಇಲ್ಲಿಯೇ ವಾಸ್ತವ್ಯ ಹೂಡಿದ್ದ ಬೊಮ್ಮಾಯಿ ಅವರು ಮೊದಲು ಕಾಟನ್ ಮಾರ್ಕೆಟ್‌ನಲ್ಲಿರುವ ಪಾಲಿಕೆ ಸದಸ್ಯ ಬಿಜೆಪಿಯ ರಾಜಣ್ಣ ಕೊರವಿ ಅವರ ವಾಣಿಜ್ಯ ಮಳಿಗೆಯಲ್ಲಿ ನಡೆದ ಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಅಲ್ಲಿ ಮಾತನಾಡಿದ ಅವರು ‘ಈ ಬಾರಿಯ ದೀಪಾವಳಿ ಮನುಷ್ಯ ಸಂಕುಲಕ್ಕೆ ಸುಖ ಹಾಗೂ ನೆಮ್ಮದಿ ತರಲಿ. ಯಾವುದೇ ರೋಗ ಹಾಗೂ ವಿಪತ್ತು ಕಾಡದಿರಲಿ. ಎಲ್ಲರೂ ಖುಷಿಯಿಂದ ಬದುಕಲಿ’ ಎಂದು ಹಾರೈಸಿದರು.

ಬಸವರಾಜ ಬೊಮ್ಮಾಯಿ ಅವರು ತಮ್ಮ ತಂದೆಯ ಕಾಲದಿಂದಲೂ ಪ್ರತಿ ದೀಪಾವಳಿಗೆ ನಮ್ಮ ಅಂಗಡಿ ಪೂಜಾ ಕಾರ್ಯದಲ್ಲಿ ಪಾಲ್ಗೊಳ್ಳುವುದು ನಡೆದುಕೊಂಡು ಬಂದಿದೆ ಎಂದು ರಾಜಣ್ಣ ಕೊರವಿ ತಿಳಿಸಿದರು.

ಶಾಸಕರಾದ ಜಗದೀಶ ಶೆಟ್ಟರ್, ಪ್ರಸಾದ ಅಬ್ಬಯ್ಯ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಕ್ಕರೆ ಖಾತೆ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಮೋಹನ ಲಿಂಬಿಕಾಯಿ, ಚನ್ನು ಪಾಟೀಲ, ಎಂಬಿಎಸ್ ನಿರ್ದೇಶಕ ಡಾ. ವಿಶ್ವನಾಥ ಕೊರವಿ ಪಾಲ್ಗೊಂಡಿದ್ದರು.

ಬಳಿಕ ಪ್ರಲ್ಹಾದ ಜೋಶಿ ಅವರ ಕಚೇರಿಯಲ್ಲಿ ನಡೆದ ಮಹಾಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದರು. ತಮ್ಮ ಆಪ್ತರು, ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಶಾಸಕ ಅಮೃತ ದೇಸಾಯಿ, ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಲಾಬೂರಾಬ್ ಇದ್ದರು. ಬಳಿಕ ಬೆಂಗಳೂರಿಗೆ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.