ದಾವಣಗೆರೆ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಾಷಾ ನಗರದಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ನೀಡಿದ್ದ ಸೀರೆಗಳನ್ನು ಸುಟ್ಟು ಮಹಿಳೆಯರು ಬುಧವಾರ ರಾತ್ರಿ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿ ಸರಿಯಾದ ಚರಂಡಿ ಇಲ್ಲ, ರಸ್ತೆ ಇಲ್ಲ. ಪ್ರಾಣಿಗಳು ವಾಸ ಮಾಡುವ ರೀತಿ ನಾವು ವಾಸ ಮಾಡುತ್ತಾ ಇದ್ದೇವೆ. ಮೂಲ ಸೌಕರ್ಯಗಳನ್ನು ಒದಗಿಸಿ ಎಂದರೆ ನಾಯಕರು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಆದರೆ ಈಗ ಸೀರೆಗಳನ್ನು ಕೊಟ್ಟು ಹೋಗುತ್ತಿದ್ದಾರೆ. ಈ ಸೀರೆಗಳು ಬೇಡ. ನಮಗೆ ಅಭಿವೃದ್ಧಿ ಬೇಕು. ಇದಕ್ಕಿಂತಲೂ ಉತ್ತಮವಾದ ಸೀರೆಗಳು ನಮ್ಮಲ್ಲಿ ಇವೆ ಎಂದು ಸ್ಥಳೀಯ ಮಹಿಳೆಯರು ಕೊಟ್ಟ ಸೀರೆಗಳನ್ನು ರಸ್ತೆಯಲ್ಲಿ ಎಸೆದು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಬಾಷಾನಗರ ಸೇರಿದಂತೆ ದಾವಣಗೆರೆ ದಕ್ಷಿಣ ಮತಕ್ಷೇತ್ರದಲ್ಲಿ ಈಚೆಗೆ ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಅವರ ಭಾವಚಿತ್ರ ಇರುವ ಕವರ್ ಗಳಲ್ಲಿ ಮಹಿಳೆಯರಿಗೆ ಸೀರೆ ಹಂಚಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.