ಮಂಗಳವಾರ, ಅಕ್ಟೋಬರ್ 22, 2019
25 °C

ಜನ ಸಂಕಷ್ಟದಲ್ಲಿದ್ದಾಗ ಸ್ಪಂದಿಸುವುದು ಕೇಂದ್ರದ ಕರ್ತವ್ಯ: ಗುಂಡೂರಾವ್

Published:
Updated:
Prajavani

ಹುಬ್ಬಳ್ಳಿ: ರಾಜ್ಯದ ಜನ ಸಂಕಷ್ಟದಲ್ಲಿದ್ದಾಗ ಸ್ಪಂದಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಸಂಭವಿಸಿ ತಿಂಗಳಾಗಿದೆ. ಸಾಕಷ್ಟು ಪ್ರಮಾಣದ ಹಾನಿಯಾಗಿದೆ. ಆದರೂ, ಕೇಂದ್ರ ಸರ್ಕಾರ ಪರಿಹಾರ ನೀಡುವ ವಿಚಾರದಲ್ಲಿ ನಿರ್ಲಕ್ಷ್ಯ ಧೋರಣೆ ತೋರಿದೆ. ರಾಜ್ಯ ಸರ್ಕಾರವೂ ನೆರವು ತರುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅನರ್ಹ ಶಾಸಕರ ಸಮಸ್ಯೆಗೆ ಸ್ಪಂದಿಸಲು ದೆಹಲಿಗೆ ಹೋಗಿ, ವರಿಷ್ಠರ ಬಳಿ ಹೋಗುತ್ತಾರೆ. ಆದರೆ, ರಾಜ್ಯದ ನೆರೆ ಪರಿಹಾರಕ್ಕೆ ಹೋಗಲಿಲ್ಲ. ಬಿಜೆಪಿಯ 25 ಸಂಸದರು ಹಾಗೂ ರಾಜ್ಯದ ಸಚಿವರು ಏನು ಮಾಡುತ್ತಿದ್ದಾರೆ? ನೆರೆ ಪರಿಹಾರ ತರುವುದಕ್ಕಿಂಗ ದೊಡ್ಡ ಕೆಲಸ ಅವರಿಗೆ ಬೇರೆ ಏನಿದೆ ಎಂದು ಪ್ರಶ್ನಿಸಿದರು.

ಇದುವರೆಗೆ ಸರ್ವ ಪಕ್ಷ ಸಭೆಯನ್ನೂ ರಾಜ್ಯ ಸರ್ಕಾರ ನಡೆಸಿಲ್ಲ. ಕೇಂದ್ರದ ಬಳಿ ನೆರವು ಕೇಳಲು ಸರ್ವ ಪಕ್ಷ ನಿಯೋಗ ಕರೆದೊಯ್ಯಲು ಅವರಿಗೆ ಮನಸ್ಸಿಲ್ಲ ಎಂದರು.

ರಾಜ್ಯದ ನೆರೆ ಸ್ಥಿತಿ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಈ ನಿರ್ಲಕ್ಷ್ಯ ಧೋರಣೆ ಖಂಡಿಸಿ, ಬೆಳಗಾವಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸುತ್ತಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)