ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಕ್ಕೆ 50 ಲಿಕ್ವಿಡ್ ಆಮ್ಲಜನಕ ಉತ್ಪಾದನಾ ಘಟಕ

Last Updated 5 ಆಗಸ್ಟ್ 2021, 15:02 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಪಿ.ಎಂ ಕೇರ್ಸ್ ನಿಧಿಯಡಿ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ವೈದ್ಯಕೀಯ ಆಮ್ಲಜನಕ ಉತ್ಪಾದಿಸುವ ಒಟ್ಟು 50 ಪಿಎಸ್‌ಎ (ಪ್ರೆಶರ್ ಸ್ವಿಂಗ್ ಅಡ್ಸಾರ್‌ಪ್ಶನ್) ಘಟಕಗಳನ್ನು ಮಂಜೂರು ಮಾಡಿದ್ದು, ಸ್ಥಾಪನೆ ಕಾರ್ಯ ಅಂತಿಮ ಹಂತದಲ್ಲಿದೆ’ ಎಂದು ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಹಾಗೂ ಗಣಿ ಇಲಾಖೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪ್ರತಿ ನಿಮಿಷಕ್ಕೆ ಒಂದು ಸಾವಿರ ಲೀಟರ್ ಆಮ್ಲಜನಕ ಪೂರೈಸುವ ಸಾಮರ್ಥ್ಯದ ಘಟಕವನ್ನುಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಲಾಗುತ್ತಿದೆ. 50ಘಟಕಗಳ ಪೈಕಿ 9ರ ನಿರ್ಮಾಣ ಪೂರ್ಣಗೊಂಡಿದೆ. ಉಳಿದ 41 ಘಟಕಗಳ ನಿರ್ಮಾಣ ಆ. 15ರೊಳಗೆ ಪೂರ್ಣಗೊಳ್ಳಲಿದೆ’ ಎಂದಿದ್ದಾರೆ.

‘ಎಲ್ಲಾ ಘಟಕಗಳು ಆರಂಭವಾದರೆ ರಾಜ್ಯದಲ್ಲಿ ಪ್ರತಿ ನಿಮಿಷಕ್ಕೆ 39,600 ಲೀಟರ್ ಅಂದರೆ, 81 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕ ಲಭ್ಯವಾಗಲಿದೆ. ಇದರಿಂದ ಆಸ್ಪತ್ರೆಗಳಲ್ಲಿ 19,376 ಹಾಸಿಗೆಗಳಿಗೆ ಆಮ್ಲಜನ ಪೂರೈಕೆ ಸಾಧ್ಯವಾಗಲಿದೆ. ಪಿ.ಎಂ ಕೇರ್ಸ್‌ನಡಿ ಎಲ್ಲಾ ರಾಜ್ಯಗಳ ಆಯ್ದ ಆಸ್ಪತ್ರೆಗಳಲ್ಲಿ, ವಿಶೇಷವಾಗಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಆರೋಗ್ಯ ಕೇಂದ್ರಗಳನ್ನು ಗಮನದಲ್ಲಿಟ್ಟುಕೊಂಡು 1,222 ಘಟಕಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

‘ಧಾರವಾಡ ಜಿಲ್ಲಾಸ್ಪತ್ರೆಗೆ ಮಂಜೂರಾಗಿರುವ ಘಟಕದ ನಿರ್ಮಾಣ ಕಾರ್ಯವನ್ನು ಆ. 15ರೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಅದಕ್ಕಾಗಿ ಅನುಷ್ಠಾನ ಸಂಸ್ಥೆಗಳಾದ ಹೈಟ್ಸ್ ಹಾಗೂ ಸ್ಥಳ ಪರಿಶೀಲನಾ ಸಂಸ್ಥೆಯಾದ ಭಾರತೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗುವುದು. ಈ ಘಟಕದಿಂದ 250 ಹಾಸಿಗೆಗಳಿಗೆ ಆಮ್ಲಜನಕ ಪೂರೈಕೆ ಮಾಡಬಹುದಾಗಿದೆ’ ಎಂದುಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT