ಶನಿವಾರ, ಸೆಪ್ಟೆಂಬರ್ 18, 2021
30 °C

ತುರ್ತು ವಿಮಾನ ಪ್ರಯಾಣದ ಕಾರಣ ಶೆಟ್ಟರ್ ಭೇಟಿ ಸಾಧ್ಯವಾಗಲಿಲ್ಲ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಜಗದೀಶ ಶೆಟ್ಟರ್ ಜತೆ ಈಗಷ್ಟೇ ಮಾತನಾಡಿದ್ದೇನೆ. ಅವರು ಬೆಂಗಳೂರಿಗೆ ಬಂದ ಬಳಿಕ ಚರ್ಚೆ ನಡೆಸುವೆ. ಇಂದು ಅವರ ಮನೆಗೆ ಭೇಟಿ ನೀಡಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದಾಗಿ ಬೆಂಗಳೂರಿಗೆ 9 ಗಂಟೆಗೆ ವಿಮಾನ ಪ್ರಯಾಣ ಕೈಗೊಳ್ಳಬೇಕಾಗಿದ್ದರಿಂದ ಭೇಟಿ ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ವಾಭಿಮಾನ ಮತ್ತು ನೈತಿಕತೆ ಬಿಟ್ಟು ಹೇಗೆ ಸಂಪುಟ ಸೇರಲಿ ಎಂದು ಶಾಸಕ ಶೆಟ್ಟರ್ ಅವರು ಅಸಮಾಧಾನ ವ್ಯಕ್ತಪಡಿಸಿರುವ ಕುರಿತು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ಅವರು ಪ್ರತಿಕ್ರಿಯಿಸಿದರು.

ಶೆಟ್ಟರ್ ಹಿರಿಯರು. ಅಸಮಾಧಾನ ಸಹಜ. ಹಾಗಾಗಿ, ಅವರನ್ನು ಭೇಟಿ ಮಾಡಿ ಚರ್ಚಿಸುವೆ ಎಂದರು.

ಇದನ್ನೂ ಓದಿ... ನನಗೆ ನೈತಿಕತೆ ಇದೆ ಸ್ವಾಭಿಮಾನ ಬಿಟ್ಟು ಹೇಗೆ ಸಂಪುಟ ಸೇರಲಿ: ಜಗದೀಶ ಶೆಟ್ಟರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು