ಮಂಗಳವಾರ, ಜನವರಿ 18, 2022
22 °C

ಸುಳ್ಳು ಪ್ರಚಾರ ಮಾಡುವುದರಲ್ಲಿ ಆರ್‌ಎಸ್‌ಎಸ್‌ ಬಿಜೆಪಿಯ ದೊಡ್ಡಪ್ಪ: ಹರಿಪ್ರಸಾದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಆರ್‌ಎಸ್‌ಎಸ್‌, ಬಿಜೆಪಿಯ ದೊಡ್ಡಪ್ಪ. ಸುಳ್ಳಿನ ಕಂತೆಯನ್ನೇ ಅವರು ಪ್ರಚಾರ ಮಾಡುತ್ತಾರೆ. ಅದಕ್ಕೆ ಜನರೂ ಬಲಿಯಾಗುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಧನೆ ಮಾಡದೆ, ಸುಳ್ಳಿನ ಕಂತೆ ಹೇಳಿ ಜನರನ್ನು ನಂಬಿಸುತ್ತಿದ್ದಾರೆ. ಜನರು ಎಚ್ಚರಿಸುವ ಕೆಲಸ ಆಗಬೇಕಿದೆ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾಲ್ವರು ಮುಖ್ಯಮಂತ್ರಿಗಳಾಗುವುದು ಖಚಿತ. ಈಗ ಇಬ್ಬರು ಆಗಿದ್ದಾರೆ. ಇನ್ನಿಬ್ಬರು ಆಗಬೇಕಿದೆ ಎಂದು ವ್ಯಂಗ್ಯವಾಡಿದರು.

ಅವಿಭಜಿತ ಧಾರವಾಡ ವಿಧಾನ ಪರಿಷತ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾಗಿದೆ. ಹಣ, ಅಧಿಕಾರ, ತೋಳ್ಬಲ, ಆಮಿಷ ಒಡ್ಡುವ ಹಾಗೂ ಭಯ ಸೃಷ್ಟಿ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಹಾನಗಲ್‌ ವಿಧಾನಸಭಾ ಉಪ ಚುನಾವಣೆಯಲ್ಲಿ ಹೀಗೆ ಮಾಡಿದಾಗ ಜನರು ಬುದ್ಧಿ ಕಲಿಸಿದ್ದರು. ಈಗಲೂ ಹಾಗೆಯೇ ಮಾಡಲಿದ್ದಾರೆ. ಪಂಚಾಯತ್‌ ರಾಜ್‌ ವ್ಯವಸ್ಥೆ ಬಲ ಪಡಿಸಲು ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಗರು ಪಕ್ಷದ ಅಭ್ಯರ್ಥಿಗೆ ಮಾತ್ರ ಮೊದಲ ಪ್ರಾಶಸ್ತ್ಯ ಮತ ನೀಡಬೇಕು. ಮೊದಲ ಪ್ರಾಶಸ್ತ್ಯದ ಮತದಲ್ಲಿಯೇ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.

ಇದನ್ನೂ ಓದಿ... ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ನಿರುದ್ಯೋಗದ ಬಗ್ಗೆ ವರುಣ್ ಗಾಂಧಿ ಹೇಳಿಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು