ಬುಧವಾರ, ಸೆಪ್ಟೆಂಬರ್ 22, 2021
28 °C

ಹುಬ್ಬಳ್ಳಿ: ಸಭೆಗೆ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದಲ್ಲಿ ಗುರುವಾರದಿಂದ ಎರಡು ದಿನ ನಡೆಯಲಿರುವ ಬೆಳಗಾವಿ ವಿಭಾಗ ಮಟ್ಟದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಇಲ್ಲಿಗೆ ಬಂದಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜಿವಾಲಾ, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ, ಕೆ.ಎಚ್. ಮುನಿಯಪ್ಪ ಬಂದಿದ್ದಾರೆ.

ನಾಯಕರನ್ನು ಸ್ವಾಗತಿಸಲು ಕಾರ್ಯಕರ್ತರು ಗೋಕುಲ ರಸ್ತೆಯುದ್ದಕ್ಕೂ ಕಾರ್ಯಕರ್ತರು ಬೈಕ್ ಜಾಥಾ ಹಮ್ಮಿಕೊಂಡಿದ್ದಾರೆ. ಜೆಸಿಬಿ‌ ಮೂಲಕ ಹೂವಿನ ಹಾರ ಹಾಕಲು ಸಿದ್ಧತೆ ಮಾಡಿಕೊಂಡಿದ್ದಾರೆ. ಇಂದು‌ ಸಂಜೆ ಹಾಗೂ ನಾಳೆ ಸಭೆ ಜರುಗಲಿದೆ.

ಇದನ್ನೂ ಓದಿ... ‘ನಾನೂ ಸಚಿವಾಕಾಂಕ್ಷಿ’; ಸಚಿವ ಸ್ಥಾನಕ್ಕೆ ಸೋಮಶೇಖರರೆಡ್ಡಿ ಲಾಬಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು