ಹುಬ್ಬಳ್ಳಿ: ವರ್ತಮಾನದ ಸಮಸ್ಯೆಗಳ ಕುರಿತು ಚರ್ಚಿಸಲು ನಗರದ ಮೂರು ಸಾವಿರ ಮಠದಲ್ಲಿ ಮಾರ್ಚ್ 27ರಂದು ಬೆಳಿಗ್ಗೆ 9.30ಕ್ಕೆ ಮಠಾಧೀಶರ ಚಿಂತನ ಮಂಥನ ಸಭೆ ಕರೆಯಲಾಗಿದೆ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ರಾಜ್ಯದ ಎಲ್ಲ ಮಠಾಧೀಶರಿಗೆ ಆಹ್ವಾನ ನೀಡಲಾಗಿದೆ ಎಂದರು.

ಇತಿಹಾಸದಿಂದಲೂ ಸಮಾಜದಲ್ಲಿ ಸಮಸ್ಯೆಗಳು ಎದುರಾದಾಗ ಮಠಾಧೀಶರು, ಸನ್ಯಾಸಿಗಳು ಧ್ವನಿ ಎತ್ತಿದ್ದಾರೆ. ಇದು ಒಂದು ಸಮಾಜಕ್ಕೆ ಸೀಮಿತವಾದ ಸಭೆಯಲ್ಲ. ಎಲ್ಲ ಮಠಾಧೀಶರು ಇದರಲ್ಲಿ ಭಾಗವಹಿಸಿ ಸಮಸ್ಯೆಗಳ ಪರಿಹಾರಕ್ಕೆ ಸಲಹೆ, ಸೂಚನೆ ನೀಡಲಿದ್ದು, ಈ ಸಭೆಯಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.

'ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ ಎಂಬುದು ಕೇವಲ ಊಹಾಪೋಹ. ಸ್ಪರ್ಧೆ ಮಾಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಒಬ್ಬ ಮಠಾಧೀಶನಾಗಿ ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳುವ ಶಕ್ತಿ, ಸ್ವಾತಂತ್ರ್ಯ ನನಗೆ ಇಲ್ಲ' ಎಂದು ಸ್ಪಷ್ಟಪಡಿಸಿದರು.

ಪ್ರಾಮಾಣಿಕರಿಗೆ ಅಪವಾದ ಸಹಜ. ಅದರಲ್ಲಿಯೂ ನನ್ನ ಮೇಲೆ ಹೆಚ್ಚು ಆರೋಪಗಳು ಬರುತ್ತವೆ. ಆದರೆ ಯಾವುದೇ ಆಮಿಷಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನನಗೆ ಯಾವುದೇ ಕುಟುಂಬವಿಲ್ಲ. ಮಠಾಧೀಶರು ಸಮಾಜದ ಮಕ್ಕಳು. ಎಲ್ಲ ಆರೋಪಗಳನ್ನು ಎದುರಿಸುವ ಶಕ್ತಿ ನನಗೆ ಇದೆ ಎಂದರು.

ರಾಜಕಾರಣಿಗಳು ಅಧಿಕಾರದ ಮದದಿಂದ ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿ ದಾರಿಗೆ ತರುವ ಕೆಲಸವನ್ನು ಮಠಾಧೀಶರು ಮಾಡಲಿದ್ದಾರೆ. ಅದು ನಮ್ಮ ಕರ್ತವ್ಯ ಎಂದು ಹೇಳಿದರು.
.ರಾಜಕೀಯ ನಾಯಕರು ಪಕ್ಷಮುಖಿ; ಸ್ವಾಮೀಜಿಗಳು ಮಠಮುಖಿ: ದಿಂಗಾಲೇಶ್ವರ ಸ್ವಾಮೀಜಿ .ಮಠಾಧೀಶರು ರಾಜಕಾರಣಿಗಳ ಅಡಿಯಾಳಾಗಬೇಡಿ: ದಿಂಗಾಲೇಶ್ವರ ಸ್ವಾಮೀಜಿ.ಯಡಿಯೂರಪ್ಪ ಕಣ್ಣೀರಲ್ಲಿ ಕೊಚ್ಚಿ ಹೋದ ಬಿಜೆಪಿ: ದಿಂಗಾಲೇಶ್ವರ ಸ್ವಾಮೀಜಿ.ಅನುದಾನ ಪಡೆಯಲು ಮಠಗಳೂ ಶೇ 30 ರಷ್ಟು ಕಮಿಷನ್ ನೀಡಬೇಕಿದೆ: ದಿಂಗಾಲೇಶ್ವರ ಸ್ವಾಮೀಜಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.