ಹುಬ್ಬಳ್ಳಿ: ‘ವ್ಯಕ್ತಿಯೊಬ್ಬರ ಮನೆ ಮೇಲೆ ನಡೆದಿರುವ ಐಟಿ ದಾಳಿಗೆ ಅವರು ಯಡಿಯೂರಪ್ಪ ಆಪ್ತ ಎಂದು ನಾನು ಸರ್ಟಿಫಿಕೇಟ್ ಕೊಡುವುದಿಲ್ಲ. ದಾಳಿ ಬಗ್ಗೆ ನನಗೆ ಎಲ್ಲವೂ ಗೊತ್ತಿದೆ. ಸದ್ಯಕ್ಕೆ ಈ ಬಗ್ಗೆ ಏನೂ ಮಾತನಾಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಡಿಯೂರಪ್ಪ ಅವರನ್ನು ಹೈಕಮಾಂಡ್ ಹೇಗೆ ನಡೆಸಿಕೊಂಡು ಬಂದಿದೆ ಎಂದು ರಾಜ್ಯದ ಜನರಿಗೆ ಗೊತ್ತಿದೆ ಎಂದರು.
ಹಾನಗಲ್ ಕ್ಷೇತ್ರದಲ್ಲಿ ಜನ ಬದಲಾವಣೆ ಬಯಸಿದ್ದು, ಈಗಿನ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ನಮ್ಮ ಅಭ್ಯರ್ಥಿ ನಿರಂತರವಾಗಿ ಜನಸಂಪರ್ಕದಲ್ಲಿದ್ದಾರೆ. ಕೋವಿಡ್ ಸಮಯದಲ್ಲಿ ಬಿಜೆಪಿ ಸರ್ಕಾರದಿಂದ ನಮಗೆ ಏನೂ ಸಿಕ್ಕಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ. ಆದ್ದರಿಂದ ಬದಲಾವಣೆ ಬಯಸಿದ್ದಾರೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.