ಗುರುವಾರ , ಅಕ್ಟೋಬರ್ 21, 2021
27 °C

ಸಿ.ಎಂ ಬೊಮ್ಮಾಯಿ ಮನೆ ಮೇಲೆ ಐಟಿ ದಾಳಿ ಮಾಡೋಕೆ ಆಗುತ್ತಾ? ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆಂದರೆ ಇದರಲ್ಲಿ ರಾಜಕೀಯ ಇರಬಹುದೇನೋ; ನನಗೆ ಗೊತ್ತಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದಾಳಿ ಬಗ್ಗೆ ಯಡಿಯೂರಪ್ಪ ಅವರನ್ನೇ ಕೇಳಬೇಕು. ಯಡಿಯೂರಪ್ಪನವರ ಆಪ್ತನ‌ ಮೇಲೆಯೇ ದಾಳಿಯಾಗಿದೆ ಅಂದ್ರೆ ಏನೋ ರಾಜಕೀಯ ಇದ್ದರೂ ಇರಬಹುದು. ಯಡಿಯೂರಪ್ಪ ಆಪ್ತರನ್ನು ಬಿಟ್ಟು ಬಸವರಾಜ ಬೊಮ್ಮಾಯಿ ಅಥವಾ ಸಚಿವರ ಮನೆ ಮೇಲೆ ದಾಳಿ ಮಾಡಲು ಆಗುತ್ತದೆಯೇ?’ ಎಂದು ಪ್ರಶ್ನಿಸಿದರು.

‘ಹಾನಗಲ್‌ ಹಾಗೂ ಸಿಂದಗಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುತ್ತದೆ. ಎರಡೂ ಕಡೆ ನಮ್ಮ ಪಕ್ಷದ ಪರ ಅಲೆಯಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ರಾಜ್ಯ ಸರ್ಕಾರದ ಆಡಳಿತದಿಂದಾಗಿ ಜನ ಭ್ರಮನಿರಸನಗೊಂಡಿದ್ದಾರೆ. ಬಿಜೆಪಿಯವರು ಚೌಕಿದಾರರಲ್ಲ ಲೂಟರ್ಸ್‌’ ಎಂದು ಟೀಕಿಸಿದರು.

ಇದನ್ನೂ ಓದಿ... ಐಟಿ ದಾಳಿ ಮೂಲಕ ಬಿಎಸ್‌ವೈ ಅವರನ್ನು ಮುಗಿಸುವ ತಂತ್ರ: ಹರಿಪ್ರಸಾದ್ ಆರೋಪ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು