ಹುಬ್ಬಳ್ಳಿ: ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಶನಿವಾರ ಧಾರವಾಡ, ವಿಜಯಪುರ, ಬಳ್ಳಾರಿ, ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಸುರಿದಿದೆ.
ಧಾರವಾಡ ಜಿಲ್ಲೆ ನವಲಗುಂದ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ವಿವಿಧಡೆ ಶನಿವಾರ ಸಂಜೆ ನಾಲ್ಕು ತಾಸು ನಿರಂತರ ಮಳೆಯಾಗಿದೆ. ಹಲವೆಡೆ ಮನೆಯೊಳಗೆ ಮಳೆ ನೀರು ನುಗ್ಗಿ ದಿನಸಿ ಹಾಗೂ ಕಾಳು ಕಡಿಗೆ ಹಾನಿಯಾಗಿದೆ.
ವಿಜಯಪುರ ನಗರ ಸೇರಿದಂತೆ ಮುದ್ದೇಬಿಹಾಳ, ತಿಕೋಟಾ, ಇಂಡಿ, ಸಿಂದಗಿ, ಬಸವನ ಬಾಗೇವಾಡಿಗಳಲ್ಲಿ ಶುಕ್ರವಾರ ಮತ್ತು ಶನಿವಾರ ಧಾರಾಕಾರ ಮಳೆ ಸುರಿಯಿತು. ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅರ್ಧ ಗಂಟೆಗೂ ಕಾಲ ಮಳೆಯಾಗಿದೆ. ಬಳ್ಳಾರಿ ಜಿಲ್ಲಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಉತ್ತಮ ಮಳೆಯಾಗಿದ್ದು ಶನಿವಾರ ಬೆಳಗಿನ ಜಾವದಿಂದ ಜಿಟಿ ಜಿಟಿ ಮಳೆ ಬಿದ್ದಿದೆ.