ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯವು ಆಗಸ್ಟ್ 27ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಿದೆ.
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಆಗಸ್ಟ್ 27ಕ್ಕೆ ನಿಗದಿಯಾಗಿರುವುದರಿಂದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಮುಂದೂಡಿರುವ ಪದವಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ವಿಶ್ವವಿದ್ಯಾಲಯದ www.kud.ac.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಪರೀಕ್ಷಾಂಗ ಕುಲಸಚಿವ ಎನ್.ವೈ.ಮಟ್ಟಿಹಾಳ್ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.