ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ 75ನೇ ಘಟಿಕೋತ್ಸವ ಏಪ್ರಿಲ್ 15ರಂದು ನಡೆಯಲಿದೆ.

ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಬೆಳಿಗ್ಗೆ 11 ಗಂಟೆ ಘಟಿಕೋತ್ಸವ ಆರಂಭವಾಗಲಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸುವರು. ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್.ಕಿರಣಕುಮಾರ ಅವರು ಘಟಿಕೋತ್ಸವ ಭಾಷಣ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಾಲ್ಗೊಳ್ಳುವರು.

ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ರ್ಯಾಂಕ್ ಪಡೆದವರು, ಪಿಎಚ್.ಡಿ ಕೋರ್ಸ್ ಪೂರೈಸಿದವರು ಘಟಿಕೋತ್ಸವದಲ್ಲಿ ಖುದ್ದಾಗಿ ಹಾಜರಾಗಬೇಕು. ಮಾಹಿತಿಗಾಗಿ www.kud.ac.in ವೆಬ್ಸೈಟ್ ಸಂಪರ್ಕಿಸಬಹುದು ಎಂದು ಪರೀಕ್ಷಾಂಗ ಕುಲಸಚಿವ ಎನ್.ವೈ.ಮಟ್ಟಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.