ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಂಗಾನಾಚ್’ ನಡೆದರೆ ಹೋಟೆಲ್ ಮೇಲೆ ದಾಳಿ: ಕೇಸರಿ ಒಕ್ಕೂಟ ಎಚ್ಚರಿಕೆ

ಹೊಸ ವರ್ಷಾಚರಣೆ
Last Updated 28 ಡಿಸೆಂಬರ್ 2019, 11:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹೊಸ ವರ್ಷಾಚರಣೆ ವೇಳೆ ಹೋಟೆಲ್‌ಗಳಲ್ಲಿ ಆಯೋಜಿಸುವ ಪಾರ್ಟಿಗಳಲ್ಲಿ ‘ನಂಗಾನಾಚ್’ ನಡೆದರೆ ದಾಳಿ ನಡೆಸಲಾಗುವುದು ಎಂದು ರಾಷ್ಟ್ರೀಯ ಕೇಸರಿ‌ ಒಕ್ಕೂಟದ ಧಾರವಾಡ ಜಿಲ್ಲಾ ಸಂಚಾಲಕ ಬಸವರಾಜ ಮಣ್ಣೂರಮಠ ಎಚ್ಚರಿಕೆ ನೀಡಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಹಲವು ಹೋಟೆಲ್‌ಗಳಲ್ಲಿ ಹೊಸ ವರ್ಷದ ವಿಶೇಷ ಪಾರ್ಟಿ ಆಯೋಜನೆ ಮಾಡಲಾಗಿದೆ.

ನಿಗದಿತ ಸಮಯಕ್ಕೆ ಹೋಟೆಲ್‌, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳನ್ನು ಬಂದ್ ಮಾಡಬೇಕು, ಭಾರತೀಯ ಸಂಸ್ಕೃತಿಗೆ ಧಕ್ಕೆ ತರುವಂತಹ ಘಟನೆ ನಡೆಯದಂತೆ‌ ನೋಡಿಕೊಳ್ಳಬೇಕು. ಮಾದಕ ವಸ್ತುಗಳ ಬಳಕೆಗೆ ಕಡಿವಾಣ ಹಾಕಬೇಕು. ಮಹಿಳೆಯೊಂದಿಗೆ ಅಸಭ್ಯ ವರ್ತನೆ ಸೇರಿದಂತೆ ಗಂಡು ಮೆಟ್ಟಿನ ನಾಡು ಹುಬ್ಬಳ್ಳಿ ಹೆಸರಿಗೆ ಕಪ್ಪು ಚುಕ್ಕಿಯಾಗುವಂತಹ ಯಾವುದೇ ರೀತಿಯ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಅವರು ಹೇಳಿದರು.

ಪಾರ್ಟಿ ನಡೆಯುವ ಎಲ್ಲ ಹೋಟೆಲ್‌ಗಳ‌ ಮೇಲೆ‌ ಸಂಘಟನೆ ಸದಸ್ಯರು ಕಣ್ಣಿಡಲಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್ ಅವರಿಗೆ ಈಗಾಗಲೇ ಮನವಿ ನೀಡಲಾಗಿದೆ ಎಂದು ಅವರು ತಿಳಿಸಿದರು. ಮುಖಂಡ ಕಾಶಿವಿಶ್ವನಾಥ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT