ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಗದಗ ಸೇರಿಕಿತ್ತೂರು ಕರ್ನಾಟಕದ ವಿವಿಧೆಡೆ ಸೋಮವಾರ ಬಿರುಸಿನ ಮಳೆ ಸುರಿಯಿತು.

ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗಾಳಿ, ಸಿಡಿಲು ಸಹಿತ ಮಳೆ ಸುರಿದಿದ್ದರಿಂದ 70ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, 20ಕ್ಕೂ ಹೆಚ್ಚು ಕಾರು, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

ಧಾರವಾಡ ಜಿಲ್ಲೆ ಅಂಬೋಳಿ ಗ್ರಾಮದಲ್ಲಿ ಮನೆಯ ಚಾವಣಿಯ ಶೀಟುಗಳು ಹಾರಿ ಹೋಗಿವೆ. ಅಣ್ಣಿಗೇರಿ, ನವಲಗುಂದ, ಕಲಘಟಗಿ, ಉಪ್ಪಿನಬೆಟಗೇರಿ, ಗುಡಗೇರಿಯಲ್ಲಿ ಸಾಧಾರಣ ಮಳೆಯಾಗಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದಲ್ಲಿ ಮುನವಳ್ಳಿ–ಬೈಲಹೊಂಗಲಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಸೇತುವೆ ಕೊಚ್ಚಿ ಹೋಗಿ ಸಂಚಾರ ಸಂಪೂರ್ಣ ಬಂದ್ ಆಗಿದೆ.

ಉತ್ತರ ಕನ್ನಡ ಜಿಲ್ಲೆಯ ಜಿಲ್ಲೆಯ ಹಳಿಯಾಳದಲ್ಲಿ ಬಿರುಸಿನ, ಭಟ್ಕಳ ಸೇರಿದಂತೆ ಕರಾವಳಿ ಪ್ರದೇಶ, ಮುಂಡಗೋಡ ಸೇರಿ ಅರೆಮಲೆನಾಡು ಭಾಗದಲ್ಲಿ ಸಾಧಾರಣ ಮಳೆ ಆಯಿತು.

ಆಳ ಸಮುದ್ರಕ್ಕೆ ತೆರಳಬೇಕಿದ್ದ ಹತ್ತಾರು ದೋಣಿಗಳು ಇಲ್ಲಿನ ಬೈತಕೋಲ ಮೀನುಗಾರಿಕೆ ಬಂದರಿನಲ್ಲಿ ಲಂಗರು ಹಾಕಿವೆ. ಮಲ್ಪೆ, ಗೋವಾ ಸೇರಿದಂತೆ ವಿವಿಧೆಡೆಯ ದೋಣಿಗಳು ಇಲ್ಲಿಯೇ ಆಶ್ರಯ ಪಡೆದಿವೆ.

ಗದಗ ನಗರ ಸೇರಿದಂತೆ ತಾಲ್ಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಮಳೆ ಸುರಿಯಿತು. ಬಾಗಲಕೋಟೆ, ನವನಗರ, ಜಿಲ್ಲೆಯ ತೇರದಾಳದಲ್ಲಿ ಜೋರು ಗಾಳಿ, ಮಳೆಯಿಂದಾಗಿ ಕೆಲವೆಡೆ ಮರಗಳು ಧರೆಗುರುಳಿದವು.

ಬಿರುಸಿನ ಮಳೆ – ಬೆಳೆಗಳಿಗೆ ಹಾನಿ (ಚಾಮರಾಜನಗರ ವರದಿ) : ಜಿಲ್ಲೆಯ ಹನೂರು, ಗುಂಡ್ಲುಪೇಟೆ, ಯಳಂದೂರು, ಚಾಮರಾಜನಗರ ತಾಲ್ಲೂಕುಗಳಲ್ಲಿ ಸೋಮವಾರ ಬಿರುಸಿನ ಮಳೆಸುರಿಯಿತು.

ಗುಂಡ್ಲುಪೇಟೆ ತಾಲ್ಲೂಕಿನ ಬೀಮನಮಡುವಿನಲ್ಲಿ ರೈತ ಮಹದೇವ ಅವರ ಜಮೀನಿನಲ್ಲಿ ಬೆಳೆದಿದ್ದ ಬೆಳ್ಳುಳ್ಳಿ, ಈರುಳ್ಳಿ, ಅರಿಸಿನ ಬೆಳೆ ಕೊಚ್ಚಿ ಹೋಗಿದೆ. ಹಲವೆಡೆ ಬಾಳೆ ಗಿಡಗಳು, ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಕೆರೆ– ಕಟ್ಟೆಗಳಲ್ಲಿ ಕೊಂಚ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-51-1349567284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.