ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿರುವ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಬಸವ ಪರಿಸರ ಸಂರಕ್ಷಣಾ ಸಮಿತಿಯಿಂದ ಮಾಲಾರ್ಪಣೆ ಮಾಡಲಾಯಿತು
ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ವಿಭಾಗೀಯ ರೈಲ್ವೆ ಹೆಚ್ಚುವರಿ ವ್ಯವಸ್ಥಾಪಕ ಪ್ರೇಮ್‌ಚಂದ್ರ ಅವರು ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು
ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿನ ಚನ್ನಮ್ಮ ಪುತ್ಥಳಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಲಾರ್ಪಣೆ ಮಾಡಿದರು. ಸಂಸದರಾದ ಗೋವಿಂದ ಕಾರಜೋಳ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಂಡಿದ್ದರು
ಹುಬ್ಬಳ್ಳಿಯ ನೈರುತ್ಯ ರೈಲ್ವೆ ಪ್ರಧಾನ ಕಚೇರಿ ರೈಲ್‌ಸೌಧದಲ್ಲಿ ನಡೆದ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಹಾ ಪ್ರಬಂಧಕ ಮುಕುಲ್ ಶರಣ್ ಮಾಥುರ್ ಪಾಲ್ಗೊಂಡಿದ್ದರು
ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಚನ್ನಮ್ಮ ಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಮೇಯರ್ ಜ್ಯೋತಿ ಪಾಟೀಲ ಭಾಗವಹಿಸಿದ್ದರು
ಹುಬ್ಬಳ್ಳಿಯಲ್ಲಿ ಬಿಜೆಪಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ಘಟಕದಿಂದ ಚನ್ನಮ್ಮ ಜಯಂತಿ ಆಚರಿಸಲಾಯಿತು