ಮಂಗಳವಾರ, ಜೂನ್ 28, 2022
28 °C

ಹುಬ್ಬಳ್ಳಿ: ಚಾಕು ಇರಿತ- ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಂಟೂರು ರಸ್ತೆಯಲ್ಲಿ ಭಾನುವಾರ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದ್ದು, ಕೆಲ ಸಮಯದಲ್ಲಿಯೇ ಬೆಂಡಿಗೇರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಜಗಳ ಬಿಡಿಸಲು ಹೋದಾಗ ಮಾತಿಗೆ ಮಾತು ಬೆಳೆದು ಡೇವಿಡ್‌ ಎಂಬುವವರಿಗೆ ವಿಜಯ ಯಮನೂರಿ ದೇವರಮನಿ ಎಂಬಾತ ಚಾಕು ಇರಿದು ಪರಾರಿಯಾಗುತ್ತಿದ್ದ. ಆ ವೇಳೆ ಆತನನ್ನು ಬಂಧಿಸಲಾಗಿದೆ. ಗಾಯಗೊಂಡಿರುವ ಡೇವಿಡ್‌ನನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆನ್ನಟ್ಟಿದ ಪೊಲೀಸರು: ಜಿಲ್ಲೆಯಲ್ಲಿ ಕಟ್ಟಿನಿಟ್ಟಿನ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಮಾಸ್ಕ್‌ ಧರಿಸದೇ ಕಾರಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಚನ್ನಮ್ಮ ವೃತ್ತದಲ್ಲಿ ಪೊಲೀಸರು ವಿಚಾರಣೆ ನಡೆಸಲು ಮುಂದಾದಾಗ ಆ ವ್ಯಕ್ತಿ ಕಾರು ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದ. ಬಳಿಕ ಪೊಲೀಸರು ಸಾಯಿ ಬಾಬಾ ದೇವಸ್ಥಾನದ ತನಕ ಬೆನ್ನು ಹತ್ತಿ ಆತನನ್ನು ಹಿಡಿದು ವಿಚಾರಣೆ ಮಾಡಿದರು.

ಎರಡು ಗಂಟೆಗಳ ಕಾಲ ಕಾರನ್ನು ತಮ್ಮ ವಶದಲ್ಲಿಟ್ಟುಕೊಂಡಿದ್ದ ಪೊಲೀಸರು ಬಳಿಕ ದಂಡ ಕಟ್ಟಿ ಹೋಗಲು ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು