ಶುಕ್ರವಾರ, ಫೆಬ್ರವರಿ 28, 2020
19 °C

ರಾಜ್ಯ ಬಿಜೆಪಿ ಸರ್ಕಾರಕ್ಕೆ ಏನೂ ಆಗದು: ಕೋಡಿಮಠದ ಸ್ವಾಮೀಜಿ ಭವಿಷ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಬಿ.ಎಸ್‌. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಸುಗಮವಾಗಿ ಅಧಿಕಾರಾವಧಿ  ಪೂರ್ಣಗೊಳಿಸಲಿದೆ. ರಾಜ್ಯ ರಾಜಕಾರಣದಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆಗಳು ಎದುರಾಗದು’ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.

ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಸದ್ಯದ ಸಮಸ್ಯೆ ಶೀಘ್ರವೇ ಬಗೆಹರಿಯಲಿದೆ. ಸಚಿವ ಸ್ಥಾನಕ್ಕೆ ಯಾರೇ ಒತ್ತಾಯಿಸಿದರೂ ಸರ್ಕಾರಕ್ಕೆ ಯಾವ ತೊಂದರೆಯೂ ಇಲ್ಲ. ಯಡಿಯೂರಪ್ಪ ಅವರ ಮುಂದಾಳತ್ವದ ಸರ್ಕಾರ ಯುಗಾದಿವರೆಗೆ ಸುಸೂತ್ರವಾಗಿ ನಡೆಯಲಿದೆ. ಅದರ ನಂತರ ಏನಾಗಲಿದೆ ಎಂದು ಮತ್ತೆ ತಿಳಿಸುತ್ತೇನೆ’ ಎಂದರು.

‘ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚು ಮಳೆಯಾಗುವ ಸೂಚನೆಯಿದೆ. ಬೆಂಕಿಯ ಅವಘಡಗಳು ಸಂಭವಿಸಲಿದೆ. ಜಲಕಂಟಕ ಎದುರಾಗಲಿದೆ. ಹೊಸ ರೋಗಗಳು ಕಾಣಿಸಿಕೊಳ್ಳಲಿದೆ’ ಎಂದು ಹೇಳಿದರು.

ರಾಮ ಮಂದಿರ ನಿರ್ಮಾಣದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ದೇಶ ಆಳುವ ರಾಜನ ಕರ್ತವ್ಯ. ಬಹುಸಂಖ್ಯಾತರ ಅಪೇಕ್ಷೆ ಕೂಡ ಅದೇ ಆಗಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು