ಕುಂದಗೋಳ: ತಾಲ್ಲೂಕಿನ ತರ್ಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಗುಡ್ಡ ಗ್ರಾಮದಲ್ಲಿ ಬಾಲಕನೊಬ್ಬನಿಗೆ ಅಪರಿಚಿತ ಮುಸುಕಧಾರಿ ವ್ಯಕ್ತಿಗಳು ಚುಚ್ಚುಮದ್ದು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

‘ಗುರುವಾರ ಮಧ್ಯಾಹ್ನ ಮನೆ ಬಳಿ ಬಂದ ಇಬ್ಬರು ಅಪರಿಚಿತರು ನಮ್ಮ ಮಗನಿಗೆ ಚುಚ್ಚುಮದ್ದು ನೀಡಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹೊಲಗೆಲಸಕ್ಕೆ ತೆರಳಿದ್ದ ಪೋಷಕರು ಮನೆಗೆ ಮರಳಿದ ಕೂಡಲೇ, ಘಟನೆ ಕುರಿತು ಬಾಲಕ ವಿಷಯ ತಿಳಿಸಿದ್ದಾನೆ. ಇದರಿಂದ ಆತಂಕಗೊಂಡ ಪೋಷಕರು, ತಕ್ಷಣವೇ ಆತನನ್ನು ಕುಂದಗೋಳ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

‘ಇಂತಹ ಪ್ರಕರಣದ ನಿಖರ ಪರೀಕ್ಷೆಗೆ ಅಗತ್ಯ ಸೌಲಭ್ಯ ಇಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಬಾಲಕನನ್ನು ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಲಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.

‘ಈ ಸಂಬಂಧ ದೂರು ದಾಖಲಾಗಿಲ್ಲ. ಪರಿಶೀಲನೆ ನಡೆಸಿದ್ದೇವೆ’ ಎಂದು ಗುಡಗೇರಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-24-1998804284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.