ಸಂಶಿ (ಗುಡಗೇರಿ): ಕುಂದಗೋಳ ತಾಲ್ಲೂಕಿನ ಸಂಶಿ ಗ್ರಾಮದ ಕೋಟೆ ಬಾವಿ ಎದ್ದಾಣಿಯಲ್ಲಿ ಗುರುವಾರ ರಾತ್ರಿ ಬಸವೇಶ್ವರ ಮೂರ್ತಿಯನ್ನು ದಿಢೀರ್ ಪ್ರತಿಷ್ಠಾಪಿಸಲಾಗಿದೆ. ಯಾರು ಪ್ರತಿಷ್ಠಾಪಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

ಗ್ರಾಮದ ಸಂಗಮೇಶ್ವರ ಸಂಘದ ಅಧ್ಯಕ್ಷ ಬಸವರಾಜ ಮುಗಳಿ ಅವರು ಬಸವೇಶ್ವರರ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಳೀಯ ಆಡಳಿತ ಹಾಗೂ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದರು. ಈ ಬಗ್ಗೆ ಪರಮೇಶ್ವರಪ್ಪ ನಾಯ್ಕರ್ ಅವರು ಕುಂದಗೋಳದಲ್ಲಿ ಈಚೆಗೆ ನಡೆದ ಜನತಾದರ್ಶನದಲ್ಲೂ ಸಚಿವ ಸಂತೋಷ ಲಾಡ್ ಅವರ ಗಮನ ತಂದಿದ್ದರು.

ತಹಶೀಲ್ದಾರ್ ರಾಜು ಮಾವರಕರ ಪ್ರತಿಕ್ರಿಯಿಸಿ, ‘ಗ್ರಾಮದ ವಿವಿಧ ಸಂಘಟನೆಗಳು ಹಾಗೂ ಮುಖಂಡರ ಸಭೆ ಕರೆಯಲಾಗಿದೆ. ಈ ಕುರಿತು ಚರ್ಚಿಸಿ, ಹಿರಿಯ ಅಧಿಕಾರಿಗಳ ಮಾರ್ಗದರ್ಶನಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘2015ರಲ್ಲಿ ಬಸವೇಶ್ವರ ವೃತ್ತ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಿಂದ ಅನುಮತಿ ನೀಡಲಾಗಿದೆ. ಮೂರ್ತಿ ಸ್ಥಾಪನೆಗೆ ಸಂಗಮೇಶ್ವರ ಸಂಘದಿಂದ ಮನವಿ ಸಲ್ಲಿಸಲಾಗಿತ್ತು, ಆದರೆ ಅನುಮತಿ ಸಿಕ್ಕಿರಲಿಲ್ಲ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಾಂಡುರಂಗ ಹಟ್ಟಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-24-498130088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.