ಕುಂದಗೋಳ: ‘ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ ಸ್ತ್ರೀರೋಗ, ಅರಿವಳಿಕೆ, ಮಕ್ಕಳ ತಜ್ಞರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಜನರಿಗೆ ಹೆಚ್ಚಿನ ಆರೋಗ್ಯ ಸೇವೆ ನೀಡಲು ಸಾಧ್ಯವಾಗುತ್ತದೆ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.

ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

‘ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತಾರತಮ್ಯ ಇಲ್ಲ. ಜನರಿಗೆ ಸೇವೆ ನೀಡಲು ಅಗತ್ಯ ಅನುದಾನ ನೀಡುತ್ತಿದ್ದೇವೆ. ಗ್ರಾಮೀಣ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಾರ್ಯ ಬಹಳ ಮುಖ್ಯವಾಗಿದ್ದು, ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಬದ್ಧವಿದೆ’ ಎಂದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ‘ಈ ಮೊದಲು ದೇಶದಲ್ಲಿ 350 ವೈದ್ಯಕೀಯ ಶಿಕ್ಷಣ ಕೇಂದ್ರಗಳಿದ್ದವು. ಈಗ 700 ವೈದ್ಯಕೀಯ ಶಿಕ್ಷಣ ಕೇಂದ್ರಗಳಿದ್ದರೂ ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ಕಾಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಶಾಸಕ ಎಂ.ಆರ್. ಪಾಟೀಲ ಮಾತನಾಡಿ, ‘ಕಮಡೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ₹3.70 ಕೋಟಿ, ತಾಲ್ಲೂಕು ಆಸ್ಪತ್ರೆಗೆ ₹1 ಕೋಟಿ , ಪಿ.ಎಚ್.ಒಗೆ ₹90 ಲಕ್ಷ ಅನುದಾನವನ್ನು ಸಚಿವರು ನೀಡಿದ್ದಾರೆ. ತಾಲ್ಲೂಕು ಆಸ್ಪತ್ರೆಗೆ ವೈದ್ಯರು ಹಾಗೂ ತಂತ್ರಜ್ಞರನ್ನು ನೇಮಿಸಲು ಕ್ರಮಕೈಗೊಳ್ಳಬೇಕು’ ಎಂದು ಕೋರಿದರು.

ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡಕ್ಕೆ ಭೂಮಿ ದಾನ ನೀಡಿದ ದಿ. ಶಂಕ್ರಪ್ಪಜ್ಜನವರ ಯಲಿವಾಳ , ದಿ.ಶಿವಮ್ಮನವರ ಯಲಿವಾಳ ಅವರ ಕುಟುಂಬದವರನ್ನು ಸನ್ಮಾನಿಸಲಾಯಿತು.

ಹೆಸ್ಕಾಂ ಅಧ್ಯಕ್ಷ ಸೈಯದ್ ಅಜೀಂ ಪೀರ್ ಖಾದ್ರಿ, ಜಿಲ್ಲಾ ಆರೋಗ್ಯಾಧಿಕಾರಿ ಎಸ್.ಎಂ. ಹೊನಕೇರಿ, ತಾಲ್ಲೂಕು ಆರೋಗ್ಯಾಧಿಕಾರಿ ಮಂಜುನಾಥ ಸೊಪ್ಪಿನಮಠ, ಗ್ಯಾರಂಟಿ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಸತೀಶ್ ಕೊಬ್ಬಯ್ಯನವರ, ಮಾಜಿ ಶಾಸಕ ಎಂ.ಎಸ್. ಅಕ್ಕಿ, ಬರ್ಮಣ್ಣ ಮುಗಳಿ, ಉಮೇಶ ಹೆಬಸೂರ, ಭರತ್ ಬೊಮ್ಮಾಯಿ, ಸಿ.ವೈ. ಕರಿಗೌಡ್ರ, ಅನಿಲ್ ಕುಮಾರ್ ಪಾಟೀಲ, ಶಿವಾನಂದ ಬೆಂತೂರ ಇದ್ದರು.

‘ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತೀಕರಣ’

ಉಪ್ಪಿನಬೆಟಗೇರಿ: ‘ಆರೋಗ್ಯ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲಾಗಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಧಾರವಾಡ ತಾಲ್ಲೂಕಿನ ಅಮ್ಮಿನಭಾವಿ ಗ್ರಾಮದ ಸರ್ಕಾರಿ ಆರೋಗ್ಯ ಕೇಂದ್ರದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಎಂಜಿನಿಯರಿಂಗ್ ವಿಭಾಗದ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ವೈದ್ಯರ ಕೊರತೆ ನೀಗಿಸಲು ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚಿಸಲಾಗಿದೆ. ತರಬೇತಿ ಹೊಂದಿದ ವೈದ್ಯರ ಸಂಖ್ಯೆಯನ್ನು 51 ಸಾವಿರದಿಂದ 1.31 ಲಕ್ಷಕ್ಕೆ ಏರಿಸಲು ಕ್ರಮವಹಿಸಲಾಗಿದೆ. ಬೇಡಿಕೆಗೆ ಅನುಗುಣವಾಗಿ ಹೊಸ ಮಾದರಿಯಲ್ಲಿ ತಜ್ಞ ವೈದ್ಯರನ್ನು ಆಸ್ಪತ್ರೆಗಳಿಗೆ ನೇಮಿಸುವ ಯೋಜನೆಯೂ ಜಾರಿಯಲ್ಲಿದೆ’ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಮಾತನಾಡಿ, ‘ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಗ್ರಾಮೀಣ ಜನರಿಗೆ ಗುಣಮಟ್ಟದ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ’ ಎಂದು ತಿಳಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಿಂದ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಕ್ಯಾನ್ಸರ್ ರೋಗಿಗಳಿಗೆ ಸ್ಥಳೀಯ ಮಟ್ಟದಲ್ಲೇ ಚಿಕಿತ್ಸೆ ದೊರೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಸುಲಭ, ಕಡಿಮೆ ವೆಚ್ಚದ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ’ ಎಂದರು.

ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ, ಅಮೃತ ದೇಸಾಯಿ, ಸೀಮಾ ಮಸೂತಿ, ವಿಭಾಗಿಯ ಜಂಟಿ ನಿರ್ದೇಶಕಿ ಪುಷ್ಪಾ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಗಪ್ಪ ಗಾಬಿ, ತಹಶೀಲ್ದಾರ್ ಡಿ.ಎಚ್.ಹೂಗಾರ, ಅನಿಲಕುಮಾರ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-24-1718608365

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.