ಕುಂದಗೋಳ: ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಸ್ಮರಣಾರ್ಥ ಷಣ್ಮುಖ ಶಿವಳ್ಳಿ ನೇತೃತ್ವದಲ್ಲಿ ಭಾನುವಾರ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿತು.

ಸಚಿವ ಶಿವಾನಂದ ಪಾಟೀಲ ಮಾತನಾಡಿ, ‘ಪ್ರತಿಯೊಬ್ಬರ ಜೀವನದಲ್ಲಿ ಮದುವೆ ಪ್ರಮುಖ ಘಟ್ಟ. ತಾಳಿ, ವಸ್ತ್ರ ಕೊಡಿಸಿ, ಸಾಮೂಹಿಕ ವಿವಾಹ ನೆರವೇರಿಸುತ್ತಿರುವ ಶಿವಳ್ಳಿ ಕುಟುಂಬದ ಕಾರ್ಯ ನಿರಂತರವಾಗಿ ಸಾಗಲಿ’ ಎಂದು ಆಶಿಸಿದರು.

ಕೆ.ಪಿ.ಸಿ.ಸಿ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ, ಶಿತಿಕಂಠೇಶ್ವರ ಸ್ವಾಮೀಜಿ ಮಾತನಾಡಿದರು. 56 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ 15 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮುಕ್ತಿ ಮಂದಿರ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ, ಮುಳ್ಳೊಳ್ಳಿ ಶಿವಯೋಗಿ ಸ್ವಾಮೀಜಿ, ಶಿವಾನಂದ ಮಠದ ಶಿವಾನಂದ ಸ್ವಾಮೀಜಿ, ಕಲ್ಯಾಣಪುರದ ಅಭಿನವ ಬಸವಣ್ಣಜ್ಜನವರು ಹಾಗೂ ಹಜರತ್ ಸೈಯದ್ ತಾಜುದ್ದಿನ ಖಾದ್ರಿ ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ತಹಶೀಲ್ದಾರ್ ರಾಜು ಮಾವರಕರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ಮಡ್ಲೇರಿ, ಕುಸುಮಾವತಿ ಶಿವಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-24-1829144492

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.