ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 43ರಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ರಾಜೇಂದ್ರ ಪ್ರಸಾದ ಕಾಲೊನಿಯಲ್ಲಿ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಕಟ್ಟಡ ನಿರ್ಮಾಣ, ವಿನಯ ಕಾಲೊನಿಯಲ್ಲಿ ಸನ್ ಸಿಟಿ ಹೆರಿಟೇಜ್ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂಬುದು ಜನರ ಬಹು ವರ್ಷಗಳ ಬೇಡಿಕೆಯಾಗಿತ್ತು. ಈಗ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಭಾಗದ ಜನರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲಾಗುವುದು’ ಎಂದರು.

‘ಅಭಿವೃದ್ದಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರದಿಂದ ಅಗತ್ಯ ಅನುದಾನ ಸಿಗುತ್ತಿಲ್ಲ. ಆದರೂ, ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ಅನುದಾನ ತರಲಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿಗೆ ಬದ್ಧವಾಗಿದ್ದು, ಜನರ ಸಹಕಾರವೂ ಅಗತ್ಯ’ ಎಂದು ಹೇಳಿದರು.

ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಖಂಡೇಕರ ಮಾತನಾಡಿದರು. ಈ ವೇಳೆ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ರಾಜು ಕಾಳೆ, ಗಿರೀಶ ಗುಮಾಸ್ತೆ, ಕೃಷ್ಣ ಕುಲಕರ್ಣಿ, ಅಶೋಕ ವಾಲ್ಮೀಕಿ, ಪ್ರವೀಣ ಪವಾರ, ರಾಮನಗೌಡ ಶೆಟ್ಟನಗೌಡರ್, ರಘು ಹಬೀಬ, ಆನಂದ ಕಾಳೆ, ವೆಂಕಟೇಶ ಹಬೀಬ, ಶ್ರೀನಿವಾಸ ನಿಟ್ಟೂರು, ವೆಂಕಟೇಶ ದಿವಾನಗಿ, ದೀರೇಂದ್ರ ಬಾಗಲಕೋಟೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.