ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಗೌರವದೊಂದಿಗೆ ಕಣವಿ ಅಂತ್ಯಕ್ರಿಯೆ: ಶಾಸಕ ಅರವಿಂದ ಬೆಲ್ಲದ

Last Updated 16 ಫೆಬ್ರುವರಿ 2022, 8:39 IST
ಅಕ್ಷರ ಗಾತ್ರ

ಧಾರವಾಡ: ಕವಿ ಡಾ. ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ಅವರು ಹೇಳಿದರು.

ಕಣವಿ ಅವರ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣವಿ ಅವರ ಕುಟುಂಬ ವರ್ಗದವರ ಇಚ್ಛೆಯಂತೆ ಕೆಲಗೇರಿಯಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು.

ಕಣಿವಿ ದರ್ಶನಕ್ಕೆ ವಿಶೇಷ ಹೆಲಿಕಾಪ್ಟರ್‌ನಲ್ಲಿ ಬರಲಿರುವ ಸಿ.ಎಂ

ಕವಿ ಡಾ. ಚೆನ್ನವೀರ ಕಣವಿ ಅವರ ಅಂತಿಮ ದರ್ಶನಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಹೆಲಿಕಾಪ್ಟರ್ ಮೂಲಕ ಧಾರವಾಡಕ್ಕೆ ಬರಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಲಿಕಾಪ್ಟರ್ ನಲ್ಲಿ ಹುಬ್ಬಳ್ಳಿಗೆ ಬಂದಿಳಿಯಲಿರುವ ಮುಖ್ಯಮಂತ್ರಿ, ಸಂಜೆ 4ರೊಳಗೆ ಧಾರವಾಡಕ್ಕೆ ಬಂದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT