ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಕೈಗೆತ್ತಿಕೊಳ್ಳಬಾರದು: ಸಚಿವ ಜೋಶಿ

Last Updated 8 ಮೇ 2022, 11:47 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಧ್ವನಿವರ್ಧಕಗಳಲ್ಲಿ ಶಬ್ದ ಎಷ್ಟಿರಬೇಕು ಎಂಬುದರ ಬಗ್ಗೆ ಪರೀಶಿಲಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಹಾಗಾಗಿ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ಹಾಗೂ ಹಿಂದೂಪರ ಸಂಘಟನೆಗಳು ನೀಡಿದ್ದ ಗಡುವು ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಮಾಡಬೇಕಾದ ಕೆಲಸವನ್ನು ಅದು ಮಾಡುತ್ತದೆ. ಬೇರೆಯವರು ಸರ್ಕಾರದ ಕೆಲಸ ಮಾಡುವ ಅಗತ್ಯವಿಲ್ಲ’ ಎಂದರು.

ರಾಜಕೀಯ ಪ್ರಯತ್ನ: ‘ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸರ್ಕಾರವೇ ಬೀಳುವಂತಹ ಕಿಂಗ್‌ಪಿನ್ ಇದ್ದಾರೆ ಎಂಬ ವಿಷಯ ಗೊತ್ತಿದ್ದವರು, ಮಾಹಿತಿ ನೀಡಲಿ. ಈ ವಿಷಯದಲ್ಲಿ ಕಾಂಗ್ರೆಸ್ ಅನಗತ್ಯವಾಗಿ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತಿದೆ. ಆ ಪಕ್ಷದ ಬ್ಲಾಕ್ ಅಧ್ಯಕ್ಷ ಕೂಡ ಸಿಕ್ಕಿ ಬಿದ್ದಿದ್ದಾನೆ. ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿರುತ್ತಿದ್ದ ಆತ, ಚುನಾವಣೆಗೆ ನಿಲ್ಲಲು ತಯಾರಿ ನಡೆಸುತ್ತಿದ್ದ ಎನ್ನಲಾಗಿದೆ. ಹಗರಣದಲ್ಲಿ ಭಾಗಿಯಾಗಿರುವವರನ್ನು ಸಿಐಡಿ ಮುಲಾಜಿಲ್ಲದೆ ಬಂಧಿಸಿ ಕ್ರಮ ಕೈಗೊಳ್ಳುತ್ತಿದೆ. ಕೆಲವರು ಪ್ರಸಿದ್ಧಿಗಾಗಿ ಆರ್‌ಎಸ್‌ಸ್ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT