ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕ್ಯಾಂಪಸ್ ಆವರಣದಲ್ಲಿ ₹37 ಕೋಟಿ ವೆಚ್ಚದಲ್ಲಿ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಈ ಎಲ್ಲಾ ಕಾಮಗಾರಿಗಳನ್ನು 11 ತಿಂಗಳ ಅವಧಿಯೊಳಗೆ ಮುಗಿಸಬೇಕು’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಇಲ್ಲನ ನವನಗರದ ವಿಶ್ವವಿದ್ಯಾಲಯದ ಕಾನೂನು ಶಾಲೆಯ ಆವರಣದಲ್ಲಿ ಬುಧವಾರ ನೂತನ ಗ್ರಂಥಾಲಯ, ಉಪಾಹಾರ ಗೃಹ, ಅನೆಕ್ಸ್ ಕಟ್ಟಡ, ಅತಿಥಿ ಗೃಹ ಹಾಗೂ ಬಾಲಕಿಯರ ವಸತಿ ನಿಲಯ ಕಟ್ಟಡಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಮಾತನಾಡಿದರು.

‘ವಿಶ್ವವಿದ್ಯಾಲಯವು ಆರ್ಥಿಕವಾಗಿ ಸ್ವಾವಲಂಬಿಯಾಗಿದ್ದು, ಸ್ವಂತ ಸಂಪನ್ಮೂಲಗಳ ಬಳಕೆಯಿಂದ ನೂತನ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗಿದೆ. ಸಂಬಂಧಿಸಿದ ಏಜೆನ್ಸಿಯ ಅಧಿಕಾರಿಗಳು ನಿಗದಿತ ಅವಧಿಯೊಳಗೆ ಎಲ್ಲಾ ಕಟ್ಟಡಗಳ ಕಾಮಗಾರಿಗಳನ್ನು ಮುಗಿಸಬೇಕು. ಒಂದು ವೇಳೆ ಕಾಮಗಾರಿ ವೇಳೆ ಯಾವುದೇ ಸಮಸ್ಯೆ ಎದುರಾದಲ್ಲಿ ಕೂಡಲೇ ನನಗೆ, ನಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರ ಗಮನಕ್ಕೆ ತರಬೇಕು. ಕಾಮಗಾರಿಯಲ್ಲಿ ವಿನಾಕಾರಣ ವಿಳಂಬವಾಗಬಾರದು’ ಎಂದು ಸೂಚಿಸಿದರು.

‘ವಿಶ್ವವಿದ್ಯಾಲಯಕ್ಕೆ ಹಣಕಾಸಿನ ತೊಂದರೆಯಿಲ್ಲ. ಸ್ವಂತ ಸಂಪನ್ಮೂಲಗಳ ಸ್ವಾವಲಂಬನೆ ನಿಧಿಯಿಂದ ₹80 ಕೋಟಿ ವೆಚ್ಚದ ವಿವಿಧ ಕಟ್ಟಡಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡರೂ ಇನ್ನೂ ₹50 ಕೋಟಿಯಿಂದ ₹60 ಕೋಟಿ ಉಳಿಯಲಿದೆ’ ಎಂದರು.

ಮೇ ಅಂತ್ಯದೊಳಗೆ ಮುಗಿಸಿ: ‘ವಿಶ್ವವಿದ್ಯಾಲಯದ ಆಡಳಿತ ಭವನ ಕಟ್ಟಡ ನಿರ್ಮಾಣ ಕಾಮಗಾರಿ ಈಗಾಗಲೇ 20 ದಿನ ವಿಳಂಬವಾಗಿದ್ದು, ಈ ಅವಧಿಯನ್ನು ಸರಿಪಡಿಸಿಕೊಂಡು ಮೇ ಅಂತ್ಯದೊಳಗೆ ಕಟ್ಟಡದ ಪೂರ್ಣ ಕಾಮಗಾರಿ ಮುಗಿಸಬೇಕು. ಜೂನ್ನಲ್ಲಿ ಶೈಕ್ಷಣಿಕ ವರ್ಷವನ್ನು ನೂತನ ಆಡಳಿತ ಭವನದಿಂದಲೇ ಆರಂಭಿಸಬೇಕು’ ಎಂದು ಸೂಚಿಸಿದರು.

ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಬಸವರಾಜು ಸ್ವಾಗತಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮೇಯರ್ ಜ್ಯೋತಿ ಪಾಟೀಲ, ಪಾಲಿಕೆಯ ವಿರೋಧ ಪಕ್ಷದ ನಾಯಕ ಇಮ್ರಾನ್ ಎಲಿಗಾರ, ಪಾಲಿಕೆ ಸದಸ್ಯೆ ನೀಲಮ್ಮ ಯಲ್ಲಪ್ಪ ಅರವಾಳದ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭವಾನಿ ನೇರಳೆ, ವಿಶ್ವವಿದ್ಯಾಲಯದ ಆಡಳಿತ ಕುಲಸಚಿವೆ ಗೀತಾ ಕೌಲಗಿ, ಮೌಲ್ಯಮಾಪನ ಕುಲಸಚಿವೆ ಪ್ರೊ.ರತ್ನಾ ಆರ್. ಭರಮಗೌಡರ್, ಸಿಂಡಿಕೇಟ್ ಸದಸ್ಯ ಪ್ರೊ.ಟಿ.ವಿ.ಕಟ್ಟಿಮನಿ, ಎಚ್.ವಿ.ಬೆಳಗಲಿ, ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ವಿ.ಡಿ.ಕಾಮರಡ್ಡಿ, ಚಿದಾನಂದ ಪಾಟೀಲ, ಎಂಜಿನಿಯರ್ ಅಶ್ವಥನಾರಾಯಣ ಎಂ.ಹೊನಕೇರಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಎಂ.ಕುಲಕರ್ಣಿ ಸೇರಿದಂತೆ ಸಿಂಡಿಕೇಟ್ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

₹37 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ...

ವಿಶ್ವವಿದ್ಯಾಲಯದ ಗ್ರಂಥಾಲಯ ಕಟ್ಟಡ ಅನೆಕ್ಸ್ ಕಟ್ಟಡ ಹಾಗೂ ಅತಿಥಿ ಗೃಹ ಕಟ್ಟಡವನ್ನು ತಲಾ ₹10 ಕೋಟಿ ವೆಚ್ಚದಲ್ಲಿ ನಿರ್ಮಾಣ. ₹5 ಕೋಟಿ ವೆಚ್ಚದಲ್ಲಿ ಉಪಾಹಾರ ಗೃಹ ಕಟ್ಟಡ ನಿರ್ಮಾಣ ಮತ್ತು ₹2 ಕೋಟಿ ವೆಚ್ಚದಲ್ಲಿ ಬಾಲಕಿಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಕಾನೂನು ಸಚಿವ ಎಚ್.ಕೆ.ಪಾಟೀಲ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಭೂಮಿ ಪೂಜೆ ನೆರವೇರಿಸಿದರು.

‘ನಿಯೋಗ ಬನ್ನಿ ಗೊಂದಲ ಸರಿಪಡಿಸಲು ಯತ್ನ’

‘ಕಾನೂನು ವಿಶ್ವವಿದ್ಯಾಲಯದ ಜಾಗ ಹಾಗೂ ಪಾಲಿಕೆಗೆ ಸಂಬಂಧಿಸಿದ 39 ಗುಂಟೆ ಜಾಗದ ವಿಷಯದಲ್ಲಿ ಹಲವು ಗೊಂದಲಗಳಿವೆ. ಈ ಬಗ್ಗೆ ಚರ್ಚಿಸಲು ಪಾಲಿಕೆ ಸದಸ್ಯರೊಂದಿಗೆ ಬೆಂಗಳೂರಿಗೆ ನಿಯೋಗ ಬನ್ನಿ ಎಂದು ಪಾಲಿಕೆ ಮೇಯರ್ ಜ್ಯೋತಿ ಪಾಟೀಲ ಅವರಿಗೆ ಸೂಚಿಸಲಾಗಿದೆ’ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಈ ಬಗ್ಗೆ ಚರ್ಚಿಸಿ ಗೊಂದಲ ಸರಿಪಡಿಸಲು ಯತ್ನಿಸಲಾಗುವುದು’ ಎಂದರು. ಇದೇ ವೇಳೆ ಪ್ರತಿಕ್ರಿಯಿಸಿದ ಮೇಯರ್ ಜ್ಯೋತಿ ಪಾಟೀಲ ಅವರು ‘ನಗರದ ಹಳೇಕೋರ್ಟ್ ಆವರಣದಲ್ಲಿರುವ ಕಟ್ಟಡವನ್ನು ಒಪ್ಪಂದದ ಪ್ರಕಾರ ಕಾನೂನು ಇಲಾಖೆಯು ಮಹಾನಗರ ಪಾಲಿಕೆಗೆ ನೀಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಅವರ ಬಳಿ ಚರ್ಚಿಸಿ ಲಿಖಿತರೂಪದಲ್ಲಿಯೇ ನಮ್ಮ ಪರವಾಗಿ ಆದೇಶದ ಪ್ರತಿ ತರಲು ಯತ್ನಿಸುತ್ತೇವೆ’ ಎಂದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವನ್ನು ರಾಜ್ಯದಲ್ಲಿಯೇ ಮಾದರಿ ವಿಶ್ವವಿದ್ಯಾಲಯವನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು ಇದಕ್ಕೆ ಎಲ್ಲರೂ ಕೈಜೋಡಿಸಬೇಕು.
-ಎಚ್.ಕೆ.ಪಾಟೀಲ, ಕಾನೂನು ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.