ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಸಾಕ್ಷರತಾ ಕಾರ್ಯಕ್ರಮ

Last Updated 25 ಡಿಸೆಂಬರ್ 2021, 4:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಷ್ಟ್ರೀಯ ಗ್ರಾಹಕರ ದಿನ ಅಂಗವಾಗಿ ಇಲ್ಲಿನ ಜೆಎಸ್ಎಸ್ ಸಕ್ರಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನ್ಯಾಯಾಧೀಶ ರವೀಂದ್ರ ಆರಿ, ಪ್ರತಿ ವ್ಯಕ್ತಿಗೂ ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಅವಶ್ಯಕ. ನಗರ, ಹಳ್ಳಿ ಹಾಗೂ ಸಮಾಜದ ಅಭಿವೃದ್ಧಿಗೆ ಜಾಗೃತ ಗ್ರಾಹಕನ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.

ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಸಿ.ಆರ್. ಪಾಟೀಲ, ‘ಗ್ರಾಹಕರ ಹಿತರಕ್ಷಣೆಗಾಗಿಯೇ ಪ್ರತ್ಯೇಕ ಕಾನೂನು ಜಾರಿಗೆ ತರಲಾಗಿದೆ. ಅಮೆರಿಕದಲ್ಲಿ ಗ್ರಾಹಕ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಂತಹ ಕಾನೂನು ಭಾರತದಲ್ಲಿ ತರುವ ಅಗತ್ಯವಿದೆ’ ಎಂದರು.

ಪ್ರಾಚಾರ್ಯೆ ಡಾ. ರೂಪಾ ಇಂಗಳಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಶ್ರೀಶೈಲ ಮುಧೋಳ, ಪ್ರೊ. ಬಾಬೂಲಾಲ ದರಗದ, ಪ್ರೊ. ದೀಪಾ ಪಾಟೀಲ, ಸುರೇಶ ಲಿಂಬಿಕಾಯಿ, ಆರ್.ಎಸ್. ಅವಧಾನಿ, ಸತೀಶ ಸಿ.ವಿ., ಬಿ. ಭರತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT