ಮಂಗಳವಾರ, ಜನವರಿ 18, 2022
27 °C

ಜೆಡಿಎಸ್ ತೊರೆದ ಲೆಂಕನಗೌಡ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಣ್ಣಿಗೇರಿ: ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರದೀಪ ಲೆಂಕನಗೌಡ್ರ ರಾಜೀನಾಮೆ ಸಲ್ಲಿಸಿದ್ದಾರೆ.

‘9 ವರ್ಷಗಳಿಂದ ಜೆಡಿಎಸ್‌ನಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಪ್ರಚಾರ ಸಮಿತಿ ಅಧ್ಯಕ್ಷ, ಧಾರವಾಡ ಜಿಲ್ಲಾ ಘಟಕದ ವಕ್ತಾರನಾಗಿ ಹಲವು ಜವಾಬ್ದಾರಿಗಳನ್ನು ಪಕ್ಷ ವಹಿಸಿತ್ತು. ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅವರು ಈಚೆಗೆ ಕಾಂಗ್ರೆಸ್ ಪಕ್ಷ ಸೇರಿಕೊಂಡ ಕಾರಣ ಅವರ ಬೆಂಬಲಿಗನಾದ ನಾನೂ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ’ ಎಂದು ಲೆಂಕನಗೌಡ್ರ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಪತ್ರವನ್ನು ಅಂಚೆ ಮೂಲಕ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಕಳುಹಿಸಲಾಗುವುದು’ ಎಂ ದರು.

ಎಸ್.ಡಿ.ಸುಂಕದ, ಕುಮಾರ ಅಂಗಡಿ, ನಿಂಗನಗೌಡ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.