ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿರತೆ ಕಾರ್ಯಾಚರಣೆ; 12 ಶಾಲೆಗಳಿಗೆ ರಜೆ

Last Updated 21 ಸೆಪ್ಟೆಂಬರ್ 2021, 12:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ನೃಪತುಂಗ ಬೆಟ್ಟದ ಸುತ್ತಲಿನ ಪ್ರದೇಶದಲ್ಲಿ ಚಿರತೆ ಓಡಾಟದ ಕುರುಹುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಬೆಟ್ಟದ ಸಮೀಪವಿರುವ 12 ಶಾಲೆಗಳಿಗೆ ಮಂಗಳವಾರದಿಂದ ಅನಿರ್ದಿಷ್ಟಾವಧಿ ರಜೆ ಘೋಷಿಸಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿಚಿರತೆ ಹಿಡಿಯುವ ಕಾರ್ಯಾಚರಣೆಯ ತೀವ್ರಗೊಳಿಸಿದ್ದು, ಐದು ಕಡೆಗಳಲ್ಲಿ ಬೋನು ಇಡಲಾಗಿದೆ. ಚಿರತೆ ಕುರುಹು ಆಧರಿಸಿ ಮ್ಯಾಪಿಂಗ್‌ ಮಾಡಲಾಗಿದ್ದು, ಅದೇ ಜಾಡಿನಲ್ಲಿ ಅರಿವಳಿಕೆ ತಜ್ಞರ ತಂಡದೊಂದಿಗೆ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್‌ ಕ್ಷೀರಸಾಗರ್ ತಿಳಿಸಿದ್ದಾರೆ.

ರಾಜನಗರದ ಕೇಂದ್ರೀಯ ವಿದ್ಯಾಲಯದ ಭೌತಿಕ ತರಗತಿಗಳನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬುಧವಾರದಿಂದ ಬೆಟ್ಟದ ಸುತ್ತಲಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಕಾರ್ಯಾಚರಣೆ ಮುಗಿಯುವವರೆಗೆ ರಜೆ ಮುಂದುವರಿಯಲಿದ್ದು, ಅಲ್ಲಿವರೆಗೆ ಮಕ್ಕಳಿಗೆ ಆನ್‍ಲೈನ್‌ಲ್ಲಿ ತರಗತಿ ನಡೆಸಲು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT